ಬಂಡೀಪುರದಲ್ಲಿ ಲಾರಿ ಡಿಕ್ಕಿಯಾಗಿ ಹೆಣ್ಣಾನೆ ಸಾವು: ಪರಿಸರವಾದಿಗಳ ಆಕ್ರೋಶ
ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಲಾರಿ ಡಿಕ್ಕಿಯಾಗಿ ಆನೆಯೊಂದು ಮಂಗಳವಾರ ರಾತ್ರಿ ಮೃತಪಟ್ಟಿದೆ.
ಕೇರಳ ರಸ್ತೆಯಲ್ಲಿ ನಿಂತಿದ್ದ ಆನೆಗೆ ವೇಗದಿಂದ ಬಂದ ಲಾರಿ ಡಿಕ್ಕಿಯಾಗಿದ್ದು ಹೆಣ್ಣಾನೆ ಸ್ಥಳದಲ್ಲೇ ಅಸುನೀಗಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ಕೊಟ್ಟಿದ್ದು ಮುಂದಿನ ತನಿಖೆ ಕೈಗೊಂಡಿದ್ದಾರೆ. ಲಾರಿ ಮತ್ತು ಲಾರಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.
ವನ್ಯಜೀವಿಗಳ ರಕ್ಷಣೆಗಾಗಿಯೇ ರಾತ್ರಿ ಸಂಚಾರಕ್ಕೆ ನಿರ್ಬಂಧ ಹೇರಿದ್ದರೂ ಆನೆ ಮೃತಪಟ್ಟಿರುವ ಘಟನೆಗೆ ವಾಹನ ಸವಾರರ ವಿರುದ್ಧ ಪರಿಸರವಾದಿಗಳು ಆಕ್ರೋಶ ಹೊರಹಾಕಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka