2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯ: ಆಂಧ್ರ ಸಿಎಂ ವಿವಾದಾತ್ಮಕ ಹೇಳಿಕೆ - Mahanayaka
1:51 PM Thursday 18 - September 2025

2ಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯ: ಆಂಧ್ರ ಸಿಎಂ ವಿವಾದಾತ್ಮಕ ಹೇಳಿಕೆ

16/01/2025

ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯ ಎಂದು ಆಂಧ್ರಪ್ರದೇಶ ಸಿಎಂ ಎನ್.ಚಂದ್ರಬಾಬು ನಾಯ್ಡು ತಿಳಿಸಿದ್ದಾರೆ. ನಿಮ್ಮ ಪೋಷಕರು ನಿಮ್ಮಂತೆಯೇ ಯೋಚಿಸಿದ್ದರೆ, ನೀವು ಈ ಜಗತ್ತಿಗೆ ಬರುತ್ತಿರಲಿಲ್ಲ ಎಂದಿದ್ದಾರೆ.


Provided by

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡಕ್ಕಿಂತ ಹೆಚ್ಚು ಮಕ್ಕಳಿರುವವರಿಗೆ ಮಾತ್ರ ಸರಪಂಚ್, ಪುರಸಭೆಯ ಕೌನ್ಸಿಲರ್ ಅಥವಾ ಮೇಯರ್ ಆಗಲು ಸಾಧ್ಯ. ರಾಜ್ಯದಲ್ಲಿ ನವದಂಪತಿ ಹೆಚ್ಚು ಮಕ್ಕಳನ್ನು ಹೊಂದಲು ಪ್ರೋತ್ಸಾಹಿಸಲು ಹೊಸ ಯೋಜನೆಗಳನ್ನು ಜಾರಿಗೆ ತರಲಾಗುತ್ತದೆ ಎಂದರು.

ಒಂದು ಕಾಲದಲ್ಲಿ ಹೆಚ್ಚು ಮಕ್ಕಳಿರುವ ವ್ಯಕ್ತಿಗಳಿಗೆ ಪಂಚಾಯತ್ ಚುನಾವಣೆ ಅಥವಾ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿರಲಿಲ್ಲ. ಆದರೆ, ಈಗ ಕಡಿಮೆ ಸಂಖ್ಯೆಯ ಮಕ್ಕಳನ್ನು ಹೊಂದಿರುವವರು ಚುನಾವಣೆಗಳಲ್ಲಿ ಸ್ಪರ್ಧಿಸಲು ಸಾಧ್ಯವಿಲ್ಲ. ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಮಾತ್ರ ಟಿಕಿಟ್ ಆಕಾಂಕ್ಷಿಗಳು ಸ್ಪರ್ಧಿಸಲು ಸಾಧ್ಯ ಎಂದು ಹೇಳಿದ್ದಾರೆ.

ಹಳೆಯ ತಲೆಮಾರಿನವರು ಹೆಚ್ಚು ಮಕ್ಕಳನ್ನು ಹೊಂದಿರುತ್ತಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ನೀವು ಒಂದು ಮಗುವನ್ನು ಮಾತ್ರ ಪಡೆಯುತ್ತಿದ್ದೀರಿ. ನಿಮ್ಮ ಪೋಷಕರು ನಿಮ್ಮಂತೆಯೇ ಯೋಚಿಸಿದ್ದರೆ, ನೀವು ಈ ಜಗತ್ತಿಗೆ ಬರುತ್ತಿರಲಿಲ್ಲ ಎಂದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ