ಪತಿ—ಪತ್ನಿಯ ನಡುವಿನ ಜಗಳ ಪತ್ನಿಯ ಕೊಲೆಯಲ್ಲಿ ದುರಂತ ಅಂತ್ಯ!

25/11/2023
ವಿಜಯನಗರ: ಪತಿ ಹಾಗೂ ಪತ್ನಿಯ ನಡುವಿನ ಜಗಳ ಪತ್ನಿಯ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.
ಡಿಂಪಲ್(28) ಹತ್ಯೆಯಾದ ಮಹಿಳೆಯಾಗಿದ್ದಾರೆ. ಈಕೆಯ ಪತಿ ಶ್ರೀಕಾಂತ್ ಹತ್ಯೆ ಮಾಡಿರುವ ಆರೋಪಿಯಾಗಿದ್ದಾನೆ. ಆರೋಪಿಯು ನೆಲ್ಲುಕುದರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ.
ಡಿಂಪಲ್ ಮತ್ತು ಶ್ರೀಕಾಂತ್ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇತ್ತೀಚೆಗೆ ಇವರ ಸಂಸಾರದಲ್ಲಿ ಭಿನ್ನಾಭಿಪ್ರಾಯಗಳು ಮೂಡಿದ್ದು, ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.
ಈ ಬಾರಿ ಜಗಳ ವಿಕೋಪಕ್ಕೆ ತಿರುಗಿದ್ದು, ಈ ವೇಳೆ ಕೋಪದ ಭರದಲ್ಲಿ ಗಂಡ ಶ್ರೀಕಾಂತ್ ಪತ್ನಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಇಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ಮುಂದುವರೆದಿದೆ.