9:32 AM Wednesday 20 - August 2025

ಕಾರ್ಮಿಕರಿಬ್ಬರ ನಡುವಿನ ಜಗಳ ಓರ್ವನ ಕೊಲೆಯಲ್ಲಿ ಅಂತ್ಯ!

kapu news
17/07/2023

ಕಾಪು: ಕಾರ್ಮಿಕರಿಬ್ಬರ ಮಧ್ಯೆ ನಡೆದ ಗಲಾಟೆ ಓರ್ವನ ಕೊಲೆಯಲ್ಲಿ ಕೊನೆಗೊಂಡಿರುವ ಘಟನೆ ಕಟಪಾಡಿ ಪೇಟೆಯಲ್ಲಿ ಜು.17ರಂದು ಸಂಜೆ ನಡೆದಿದೆ.

ಮೃತರನ್ನು ಒರಿಸ್ಸಾ ಮೂಲದ ಕಾರ್ಮಿಕ ಗಣೇಶ್(50) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ಪರಾರಿಯಾಗಿದ್ದು, ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಕಟಪಾಡಿ -ಶಿರ್ವ ರಸ್ತೆಯಲ್ಲಿರುವ ಕಟ್ಟಡ ಕಾಮಗಾರಿ ಮಾಡುತ್ತಿದ್ದ ಇವರಿಬ್ಬರ ಮಧ್ಯೆ ಕೆಲಸದ ವಿಚಾರವಾಗಿ ನಡೆದ ಹೊಡೆದಾಟದಲ್ಲಿ ಗಣೇಶ್ ಗಂಭೀರವಾಗಿ ಗಾಯಗೊಂಡಿದ್ದರೆನ್ನಲಾಗಿದೆ. ಕೂಡಲೇ ಸ್ಥಳೀಯರು ಹಾಗೂ ಇತರ ಕಾರ್ಮಿಕರು ಗಣೇಶ್‌ನನ್ನು ಆಸ್ಪತ್ರೆಗೆ ಸಾಗಿಸಿದ್ದು, ದಾರಿ ಮಧ್ಯೆ ಗಣೇಶ್ ಮೃತಪಟ್ಟರೆಂದು ತಿಳಿದುಬಂದಿದೆ.

ಸ್ಥಳಕ್ಕೆ ಉಡುಪಿ ಎಸ್ಪಿ ಅಕ್ಷಯ್ ಹಾಕೇ ಮಚ್ಚೀಂದ್ರ, ಹೆಚ್ಚುವರಿ ಎಸ್ಪಿ ಸಿದ್ಧಲಿಂಗಪ್ಪ, ಕಾರ್ಕಳ ಡಿವೈಎಸ್ಪಿ ಅರವಿಂದ ಕುಲಗುಜ್ಜಿ, ಕಾಪು ಪೊಲೀಸ್ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ, ಕಾಪು ಎಸ್ಸೈ ಶ್ರೀಶೈಲ ಮುರಗೋಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version