ದಲಿತನ ಹತ್ಯೆ: ನ್ಯಾಯಕ್ಕಾಗಿ ಹೋರಾಡಿದ ದಲಿತ ಯುವಕರ ವಿರುದ್ಧವೇ ಪ್ರಕರಣ ದಾಖಲು!

ದಾವಣಗೆರೆ: ದಲಿತ ವ್ಯಕ್ತಿಯ ಹತ್ಯೆಯ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದ ದಲಿತ ಯುವಕರ ವಿರುದ್ಧವೇ ಚನ್ನಗಿರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿರುವ ಘಟನೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.
ವರದಿಗಳ ಪ್ರಕಾರ, ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕೊಡಕಿಕೆರೆ ಕ್ಯಾಂಪ್ ನ ದಲಿತ ಕೂಲಿ ಕಾರ್ಮಿಕ ಶೇಖರಪ್ಪ(50) ಜಮೀನ್ದಾರನ ಬಳಿ ಕೂಲಿ ಕೆಲಸಕ್ಕೆ ಬರುವುದಾಗಿ ಹೇಳಿ ಹಣ ಪಡೆದು ಕೆಲಸಕ್ಕೆ ಹೋಗಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಬೈಕ್ ನಿಂದ ಡಿಕ್ಕಿ ಹೊಡೆದು ಶೇಖರಪ್ಪನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು.
ಶೇಖರಪ್ಪನ ಹತ್ಯೆ ಹಿನ್ನೆಲೆಯಲ್ಲಿ ಚಂದ್ರಶೇಖರ್ ನನ್ನು ಬಂಧಿಸುವಂತೆ ಒತ್ತಾಯಿಸಿ ದಲಿತ ಯುವಕರು ಶೇಖರಪ್ಪನ ಮೃತದೇಹವನ್ನಿಟ್ಟು ಪ್ರತಿಭಟನೆ ನಡೆಸಿದ್ದರು.
ಆದರೆ ಕೊಲೆ ಆರೋಪಿಯನ್ನು ಬಂಧಿಸಬೇಕಿದ್ದ ಪೊಲೀಸರು ಪ್ರತಿಭಟನೆ ನಡೆಸಿದ ಯುವಕರ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಕೇಸ್ ದಾಖಲು ಮಾಡಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.
ನ್ಯಾಯಕ್ಕಾಗಿ ಹೋರಾಡಿದವರ ವಿರುದ್ಧವೇ ಪ್ರಕರಣ ದಾಖಲಿಸಿದ ಪೊಲೀಸರ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದೆ.