ಮುಡಾ ಹಗರಣ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲು!

ಮೈಸೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿರುವ ಹಿನ್ನೆಲೆ ಮೈಸೂರಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಕಲಿ ದಾಖಲೆ ಸೃಷ್ಟಿ ಮೂಲಕ ಮುಡಾ ವಂಚಿಸಿ ಕೋಟ್ಯಂತರ ಬೆಲೆಯ ನಿವೇಶನ ಪಡೆದ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನಸ್ವಾಮಿ, ಭೂ ಮಾಲೀಕ ಎಂದು ಹೇಳುವ ದೇವರಾಜು ಹಾಗೂ ಕುಟುಂಬದವರ ವಿರುದ್ಧ ದೂರು ದಾಖಲಾಗಿದೆ ಎಂದು ವರದಿಯಾಗಿದೆ.
ಅಲ್ಲದೇ ಜಿಲ್ಲಾಧಿಕಾರಿ, ತಹಶೀಲ್ದಾರ್, ಉಪ ನೊಂದಣಾಧಿಕಾರಿ ಹಾಗೂ ಮುಡಾ ಅಧಿಕಾರಿಗಳು ಈ ಪ್ರಕರಣದಲ್ಲಿ ಶಾಮೀಲಾಗಿರುವ ಬಗ್ಗೆ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬವರು ದೂರು ನೀಡಿದ್ದು, ರಾಜ್ಯಪಾಲ, ರಾಜ್ಯ ಮುಖ್ಯಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೂ ಪತ್ರ ಬರೆದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97