ಬ್ಯಾಂಕ್ ನಲ್ಲಿ ಖಾಲಿ ಇರುವ 6,128 ಕ್ಲರ್ಕ್ ಹುದ್ದೆಗಳ ಭರ್ತಿ: ನಮ್ಮ ಕನ್ನಡಿಗರಿಗಾಗಿ 457 ಹುದ್ದೆಗಳು ಮೀಸಲು!

clerk posts
07/07/2024

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯೋಗವು ಭಾರತ ದೇಶಾದ್ಯಂತ ವಿವಿಧ ಬ್ಯಾಂಕುಗಳಲ್ಲಿ ಖಾಲಿ ಇರುವಂತಹ ಕ್ಲರ್ಕ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದೆ.

ಭಾರತ ದೇಶಾದ್ಯಂತ ಒಟ್ಟು 6128 ಹುದ್ದೆಗಳು ಖಾಲಿ ಇದ್ದು, ಇದರಲ್ಲಿ ಕರ್ನಾಟಕ ರಾಜ್ಯದವರಿಗಾಗಿಯೇ 457 ಹುದ್ದೆಗಳನ್ನು ಮೀಸಲಾತಿ ನೀಡಲಾಗಿದ್ದು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಮಾಡಬಯಸುವಂತಹ ಅಭ್ಯರ್ಥಿಗಳು ಈ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿರಿ.

IBPS Clerk Recruitment 2024 — ಈ ನೇಮಕಾತಿಗಾಗಿ ಅರ್ಜಿ ಸಲ್ಲಿಸಲು ಬ್ಯಾಂಕ್ ಸಿಬ್ಬಂದಿ ನೇಮಕಾತಿ ಆಯ್ಕೆ ಆಯೋಗವು ನಿಗದಿಪಡಿಸಿರುವ ಎಲ್ಲಾ ಅರ್ಹತೆಗಳ ವಿವರವನ್ನು ಇಲ್ಲಿ ತಿಳಿಸಿದ್ದು ಹಾಗೂ ಇದರ ಜೊತೆಗೆ ನೇಮಕಾತಿ ಸಂಪೂರ್ಣ ವಿವರವನ್ನು ಇಲ್ಲಿ ತಿಳಿಸಲಾಗಿದೆ. ಆಸಕ್ತರು ಎಲ್ಲ ಮಾಹಿತಿಯನ್ನು ತಿಳಿದುಕೊಂಡು ಅರ್ಜಿ ಸಲ್ಲಿಸಿ.

ನೇಮಕಾತಿಗೆ ಅರ್ಹತೆಗಳು – ನೇಮಕಾತಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಯಾವುದಾದರೂ ವಿಷಯದಲ್ಲಿ ಪದವಿ ಮುಗಿಸಿದ್ದರೆ ಸಾಕು ಅರ್ಜಿ ಸಲ್ಲಿಸಲು ಅರ್ಹರಿರುತ್ತೀರಿ.

ವಯೋಮಿತಿ ಅರ್ಹತೆಗಳೇನು?:

ಅರ್ಜಿ ಸಲ್ಲಿಸುವವರು ನಿಗದಿಪಡಿಸಿದ ದಿನಾಂಕಕ್ಕೆ ಕನಿಷ್ಠ 20 ವರ್ಷದಿಂದ ಹಾಗೂ ಗರಿಷ್ಠ 28 ವರ್ಷದ ಒಳಗಿರಬೇಕು. ಒಂದು ವೇಳೆ ನೀವು ಮೀಸಲಾತಿ ವರ್ಗಗಳ ಅಡಿಯಲ್ಲಿ ಬರುವುದಾದರೆ ನಿಮಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

 ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ:

ನೇಮಕಾತಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿನ ಹಂತದಲ್ಲಿ ಪ್ರಿಲಿಮನರಿ ಪರೀಕ್ಷೆ ನಡೆಸಲಾಗುತ್ತದೆ ನಂತರದಲ್ಲಿ ಮುಖ್ಯ ಪರೀಕ್ಷೆಯನ್ನು ನಡೆಸಿ ದಾಖಲಾತಿ ಪರಿಶೀಲನೆ ಮುಖಾಂತರ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಅರ್ಜಿ ಶುಲ್ಕ ಮಾಹಿತಿ:

*  ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಂಗವಿಕಲ ಹಾಗೂ ಮಾಜಿ ಸೈನಿಕ ಅಭ್ಯರ್ಥಿಗಳ 175 ಅರ್ಜಿ ಶುಲ್ಕವನ್ನು ಪಾವತಿಸಬೇಕು.

*  ಮೇಲಿನ ವರ್ಗದ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳು 850 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಅರ್ಜಿ ಸಲ್ಲಿಸಲು ಜುಲೈ 21 ಕೊನೆ ದಿನಾಂಕವಾಗಿರುವುದರಿಂದ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ.

ಅರ್ಜಿ ಲಿಂಕ್ : https://www.ibps.in/index.php/clerical-cadre-xiv/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ

Exit mobile version