ಚಿತ್ರ ನಿರ್ಮಾಪಕ ಕುಮಾರ್, ಸುರೇಶ್ ವಿರುದ್ದ ಪಟ್ಟಣ ಪೋಲಿಸ್ ಠಾಣೆಯಲ್ಲಿ ದೂರು

ಚಾಮರಾಜನಗರ, ಜು. 19- ಚಿತ್ರ ನಿರ್ಮಾಪಕ ಕುಮಾರ್ ಹಾಗೂ ಸುರೇಶ್ ಎಂಬುವವರ ವಿರುದ್ದ ಪಟ್ಟಣ ಪೊಲೀಸ್ ಠಾಣೆಯಲ್ಲಿ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ದೂರು ನೀಡಿದ್ದಾರೆ.
ಚಿತ್ರನಟ ಕಿಚ್ಚ ಸುದೀಪ್ ವಿರುದ್ದ ಬೆಂಗಳೂರು ಮೂಲದ ನಿರ್ಮಾಪಕ ಎಂ.ಎನ್ .ಕುಮಾರ್ ಹಾಗೂ ಎಂ.ಎನ್.ಸುರೇಶ ಎಂಬುವವರು ಸುಳ್ಳು ಸುದ್ದಿ ಹಾಗೂ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಾ ಸುದೀಪರವರಿಗೆ ಮಾನಹಾನಿ ಮಾಡುತ್ತಿದ್ದಾರೆ. ಅಲ್ಲದೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಆರೋಪಿಸಿ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಚಾಮರಾಜನಗರ ಜಿಲ್ಲಾ ಆಲ್ ಇಂಡಿಯಾ ಬಾದ್ ಷಾ ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಸಿಯೇಷನ್ ಅಧ್ಯಕ್ಷ ನಾಗೇಂದ್ರ ನಗರದ ಪಟ್ಟಣ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw