ಕೊನೆಗೂ ವದಂತಿಗಳಿಗೆ ಬ್ರೇಕ್: ಮಾಧ್ಯಮಗಳಿಗೆ ತಡೆಯಾಜ್ಞೆ ತಂದ ದರ್ಶನ್ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಹಾಗೂ ಅವರ ವೈಯಕ್ತಿಕ ಜೀವನದ ಬಗ್ಗೆ ಸಾಲು ಸಾಲು ಆರೋಪಗಳನ್ನು ಮಾಡಲಾಗಿತ್ತು. ಇದೀಗ ಅಂತಿಮವಾಗಿ ಎಚ್ಚೆತ್ತುಕೊಂಡ ದರ್ಶನ್ ಪತ್ನಿ ವಿಜಯಲಕ್ಷ್ಮೀ, ಆಧಾರ ರಹಿತ ಸುದ್ದಿಗಳಿಗೆ ತಡೆಯಾಜ್ಞೆ ತಂದಿದ್ದಾರೆ.
ಈ ಬಗ್ಗೆ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿರುವ ವಿಜಯಲಕ್ಷ್ಮೀ ಅವರು, ಕಳೆದ ಕೆಲವು ದಿನಗಳಿಂದ ದರ್ಶನ್, ನಾನು, ನನ್ನ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳು ದುಃಖದಲ್ಲಿದ್ದೇವೆ.
ನ್ಯಾಯಾಲಯವು ತಡೆಯಾಜ್ಞೆ ನೀಡಿದ್ದು, ಪ್ರಕರಣದಲ್ಲಿ ವಿವಿಧ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿದ್ದ ಕೆಲವು ಸುಳ್ಳು ಮಾಹಿತಿ ಮತ್ತು ಅಸತ್ಯಗಳನ್ನು ಜನರು ವಿಶ್ರಾಂತಿ ಪಡೆಯುತ್ತಾರೆ ಎಂದು ನಾನು ಭಾವಿಸುತ್ತೇನೆ. ಅಧಿಕಾರಿಗಳು ನೀಡುವ ಅಧಿಕೃತ ಮಾಹಿತಿಯನ್ನಷ್ಟೇ ಪ್ರಕಟಿಸಲು ನಾನು ಪ್ರತಿಯೊಬ್ಬರನ್ನೂ ಕೋರುತ್ತೇನೆ ಎಂದಿದ್ದಾರೆ.
ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಜಯ ಸಾಧಿಸಲಿ. ಸತ್ಯಮೇವ ಜಯತೇ ಎಂದು ಅವರು ತಿಳಿಸಿದ್ದಾರೆ.
ಸದ್ಯ ದರ್ಶನ್ ಹಾಗೂ ಅವರ ಕುಟುಂಬದ ವೈಯಕ್ತಿಕ ಹಾಗೂ ಕೌಟುಂಬಿಕ ಜೀವನಕ್ಕೆ ಸಂಬಂಧಿಸಿದ ಸುದ್ದಿ ಅಥವಾ ಇತರ ಮಾಹಿತಿಗಳನ್ನು ಮುದ್ರಿಸುವುದು, ಪ್ರಕಟಿಸುವುದು, ಪ್ರಸಾರ ಮಾಡುವುದು ಅಲ್ಲದೇ ತನಿಖೆಗೆ ಸಂಬಂಧಿಸಿದ ಯಾವುದೇ ಅನಧಿಕೃತ ಮಾಹಿತಿ ಅಭಿಪ್ರಾಯವನ್ನು ಪ್ರಕಟಿಸುವುದು, ಪ್ರಸಾರ ಮಾಡುವುದನ್ನು ನಿರ್ಬಂಧಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97