ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ: ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತನ ಸಹಿತ 10 ಮಂದಿಯ ವಿರುದ್ಧ FIR - Mahanayaka
12:16 AM Thursday 18 - December 2025

ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನ: ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತನ ಸಹಿತ 10 ಮಂದಿಯ ವಿರುದ್ಧ FIR

c t ravi
23/12/2024

ಬೆಳಗಾವಿ: ಸುವರ್ಣ ಸೌಧದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಮೇಲೆ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲಕ್ಷ್ಮೀ ಹೆಬ್ಬಾಳ್ಕರ್ ಆಪ್ತನ ಸಹಿತ 10 ಮಂದಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಅಶ್ಲೀಲ ಪದ ಬಳಕೆ ಮಾಡಿರುವ ಆರೋಪದ ಹಿನ್ನೆಲೆ ಸುವರ್ಣ ಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು. ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು ಸುವರ್ಣ ಸೌಧದೊಳಗೆ ನುಸುಳಿ ಸಿ.ಟಿ.ರವಿ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ.
ಈ ಘಟನೆಗೆ ಸಂಬಂಧಿಸಿದಂತೆ ಸಿ.ಟಿ.ರವಿ ಇದೀಗ ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಖಾನಾಪುರ ಪೊಲೀಸ್ ಠಾಣೆಯಲ್ಲಿ ಸಿ.ಟಿ.ರವಿ ದೂರು ಸಲ್ಲಿಸಿದ್ದರು.

ಈ ಪ್ರಕರಣ ಹೀರೇಬಾಗೇವಾಡಿ ಠಾಣೆಗೆ ವರ್ಗಾವಣೆಗೊಂಡಿತ್ತು. ಸಿ.ಟಿ.ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿ ಪೋಸ್ಟ್ ಮೂಲಕ ಪೊಲೀಸರ ಕೈಗೆ ಸೇರಿದ ಬೆನ್ನಲ್ಲೇ ಹೀರೇಬಾಗೇವಾಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ