ನಿರ್ಮಲಾ ಸೀತಾರಾಮನ್, ಕಟೀಲ್, ವಿಜಯೇಂದ್ರ ಸಹಿತ ಐವರ ವಿರುದ್ಧ ಎಫ್ ಐಆರ್: ಇಲ್ಲಿದೆ ವಿವರ
ಬೆಂಗಳೂರು: ಅಧಿಕಾರ ದುರುಪಯೋಗಪಡಿಸಿಕೊಂಡು ಚುನಾವಣಾ ಬಾಂಡ್ ಪಡೆದ ಆರೋಪದಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಹಲವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.
ಒಟ್ಟು ಐವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಎಫ್ ಐಆರ್ ನಲ್ಲಿ ನಿರ್ಮಲಾ ಸೀತಾರಾಮನ್ ಎ1, ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್ ಕುಮಾರ್ ಕಟೀಲ್ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ ಎಂದು ತಿಳಿದು ಬಂದಿದೆ.
ನಿರ್ಮಲಾ ಸೀತಾರಾಮನ್ ಹಾಗೂ ಇತರರು ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ್ದಾರೆ ಎಂದು ಆರೋಪಿಸಿ ಆದರ್ಶ್ ಐಯ್ಯರ್ ಎಂಬವರು ದೂರು ನೀಡಿದ್ದು, ಈ ದೂರನ್ನು ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: