“ಮಹಾಲಕ್ಷ್ಮಿ ದೇವಿ ಗುದದ್ವಾರದಲ್ಲಿ ನೆಲೆಸಿದ್ದಾಳೆ” ಎಂದ ಆರ್ಯವರ್ಧನ್ ಗುರೂಜಿ ವಿರುದ್ಧ ಎಫ್ ಐಆರ್

aryavardhan guruji
10/07/2026

ಬೆಂಗಳೂರು: ಹಿಂದೂ ಧರ್ಮ ಹಾಗೂ ಮಹಿಳೆಯರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ರೀತಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ, ಕನ್ನಡ ಬಿಗ್ ಬಾಸ್ ಮಾಜಿ ಸ್ಪರ್ಧಿ ಹಾಗೂ ಪ್ರಸಿದ್ಧ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಗುರೂಜಿ ವಿರುದ್ಧ ಬೆಂಗಳೂರಿನ ಶಂಕರಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.

ಖಾಸಗಿ ಸಾಮಾಜಿಕ ಜಾಲತಾಣದ ಸಂದರ್ಶನವೊಂದರಲ್ಲಿ ಮಾತನಾಡುವಾಗ ಆರ್ಯವರ್ಧನ್ ಗುರೂಜಿ ಅವರು ಮಹಾಲಕ್ಷ್ಮಿ ದೇವಿಯ ಕುರಿತು ಅತ್ಯಂತ ಅವಹೇಳನಕಾರಿ ಮತ್ತು ಅಶ್ಲೀಲ ಪದಗಳನ್ನು ಬಳಸಿದ್ದಾರೆ ಎಂದು ಆರೋಪಿಸಲಾಗಿದೆ. “ಮಹಾಲಕ್ಷ್ಮಿ ದೇವಿಯು ಗುದದ್ವಾರದಲ್ಲಿ ನೆಲೆಸಿದ್ದಾಳೆ, ಅದನ್ನು ಪೂಜಿಸಬೇಕು” ಎಂಬ ಅರ್ಥ ಬರುವಂತೆ ಅವರು ನೀಡಿರುವ ಹೇಳಿಕೆ ಈಗ ತೀವ್ರ ವಿವಾದಕ್ಕೆ ಕಾರಣವಾಗಿದೆ.

ಕರ್ನಾಟಕ ಗೋವು ರಕ್ಷಕರ ಸೇನೆಯ ಸಂಸ್ಥಾಪಕ-ಅಧ್ಯಕ್ಷರಾದ ಎಸ್.ಜಿ. ಸುಮನ್ ಕುಮಾರ್ ಅವರು ನೀಡಿದ ಲಿಖಿತ ದೂರಿನ ಆಧಾರದ ಮೇಲೆ ವಿ.ವಿ.ಪುರಂ ಉಪವಿಭಾಗದ ಶಂಕರಪುರ ಪೊಲೀಸರು ಈ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿಕೊಂಡಿದ್ದಾರೆ.

ಗುರೂಜಿ ಅವರ ಈ ಮಾತುಗಳು ಕೇವಲ ಮಹಿಳೆಯರ ಘನತೆಗೆ ಕುಂದು ತರುವುದಲ್ಲದೆ, ಇಡೀ ಹಿಂದೂ ಸಮಾಜದ ಭಾವನೆಗಳನ್ನು ಕೆರಳಿಸುವ ಮತ್ತು ಸಮಾಜದಲ್ಲಿ ಧಾರ್ಮಿಕ ವೈಮನಸ್ಸು ಮೂಡಿಸುವ ದುರುದ್ದೇಶದಿಂದ ಕೂಡಿದೆ ಎಂದು ದೂರುದಾರರು ಆರೋಪಿಸಿದ್ದಾರೆ.

ದೂರನ್ನು ಸ್ವೀಕರಿಸಿದ ಶಂಕರಪುರ ಪೊಲೀಸರು ತಕ್ಷಣವೇ ದೂರುದಾರರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಜೊತೆಗೆ ಆರ್ಯವರ್ಧನ್ ಅವರು ಮಾತನಾಡಿದ್ದಾರೆನ್ನಲಾದ ವಿಡಿಯೋ ತುಣುಕನ್ನು ಪರಿಶೀಲನೆ ನಡೆಸಿದ್ದಾರೆ. ತದನಂತರ, ಕಾನೂನು ತಜ್ಞರಿಂದ ಸೂಕ್ತ ಸಲಹೆ ಮತ್ತು ಅಭಿಪ್ರಾಯಗಳನ್ನು ಪಡೆದುಕೊಂಡು ಆರ್ಯವರ್ಧನ್ ಗುರೂಜಿ ವಿರುದ್ಧ ಅಧಿಕೃತವಾಗಿ ಪ್ರಕರಣ ದಾಖಲಿಸಲಾಗಿದೆ. ಸದ್ಯ ಪೊಲೀಸರು ಈ ಕುರಿತು ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version