ಎಸ್ ಪಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿದ ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್! - Mahanayaka

ಎಸ್ ಪಿ ಉಮಾ ಪ್ರಶಾಂತ್ ಅವರನ್ನು ನಾಯಿಗೆ ಹೋಲಿಸಿದ ಬಿಜೆಪಿ ಶಾಸಕನ ವಿರುದ್ಧ ಎಫ್ ಐಆರ್!

mla b p harish
04/09/2025

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ (ಎಸ್‌ಪಿ) ಉಮಾ ಪ್ರಶಾಂತ್ ಅವರ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ನೀಡಿದ ಹಿನ್ನೆಲೆ ಬಿಜೆಪಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಕೆಟಿಜೆ ನಗರ ಠಾಣೆಯಲ್ಲಿ ಎಫ್‌ ಐಆರ್ ದಾಖಲಾಗಿದೆ.


Provided by

ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕ ಬಿ.ಪಿ. ಹರೀಶ್ ಅವರು ಇತ್ತೀಚೆಗೆ ಎಸ್‌ ಪಿ ಉಮಾ ಪ್ರಶಾಂತ್ ಅವರನ್ನು ಟೀಕಿಸುವ ಸಂದರ್ಭದಲ್ಲಿ, ಕಾಂಗ್ರೆಸ್‌ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಮನೆಯ ಪೊಮೇರಿಯನ್ ನಾಯಿಯಂತೆ ಆಡುತ್ತಾರೆ” ಎಂದು ಪದಪ್ರಯೋಗ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಎಸ್‌ ಪಿ ಉಮಾ ಪ್ರಶಾಂತ್ ಸ್ವತಃ ಕೆಟಿಜೆ ನಗರ ಠಾಣೆಗೆ ದೂರು ದಾಖಲಿಸಿದ್ದಾರೆ.

ಎಸ್‌ ಪಿ ಉಮಾ ಪ್ರಶಾಂತ್ ಅವರು ದಾಖಲಿಸಿದ ದೂರಿನ ಆಧಾರದ ಮೇಲೆ, ಕೆಟಿಜೆ ನಗರ ಠಾಣೆಯಲ್ಲಿ ಶಾಸಕ ಬಿ.ಪಿ. ಹರೀಶ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಎಫ್‌ ಐಆರ್‌ನಲ್ಲಿ ಶಾಸಕರು ಪೊಲೀಸ್ ಅಧಿಕಾರಿಯೊಬ್ಬರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ