ಮಹಾರಾಷ್ಟ್ರ ಉಪಮುಖ್ಯಮಂತ್ರಿಯ ಹಾಸ್ಯ ಆರೋಪ: ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ವಿರುದ್ಧ ಎಫ್‌ಐಆರ್

28/03/2025

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಹಾಸ್ಯ ಕಲಾವಿದ ಕುನಾಲ್ ಕಾಮ್ರಾ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈ ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ಕೋರಿ ಕಾಮ್ರಾ ಶುಕ್ರವಾರ ಮದ್ರಾಸ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಶಿಂದೆ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿದಂತೆ ಮಾರ್ಚ್ 31ರಂದು ವಿಚಾರಣೆಗೆ ಹಾಜರಾಗುವಂತೆ ಕುನಾಲ್ ಅವರಿಗೆ ಪೊಲೀಸರು ಗುರುವಾರ ಸಮನ್ಸ್‌ ನೀಡಿದ್ದರು.
ಮುಂಬೈನ ಹ್ಯಾಬಿಟ್ಯಾಟ್ ಸ್ಟುಡಿಯೊದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮವೊಂದರಲ್ಲಿ ‘ದಿಲ್‌ ತೊ ಪಾಗಲ್‌ ಹೈ’ ಚಿತ್ರದ ಜನಪ್ರಿಯ ಹಾಡೊಂದನ್ನು ತುಸು ಬದಲಿಸಿ ಕಾಮ್ರಾ ಅವರು, ಶಿಂದೆ ಅವರನ್ನು ಗುರಿಯಾಗಿಸಿ ‘ವಂಚಕ’ ಎಂದಿದ್ದಾರೆ ಎಂಬ ಆರೋಪವು ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿತ್ತು.

ಇದಕ್ಕೆ ಶಿವಸೇನಾ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸ್ಟುಡಿಯೊ ಮತ್ತು ಅದು ಇರುವ ಹೋಟೆಲ್ ಅನ್ನು ಧ್ವಂಸಗೊಳಿಸಿದ್ದರು.
ಶಿವಸೇನಾ ಶಾಸಕ ಮುರ್ಜಿ ಪಟೇಲ್ ರ ದೂರಿನ ಮೇರೆಗೆ ಖಾರ್ ಪೊಲೀಸರು ಕಾಮ್ರಾ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ

Exit mobile version