ಸಿಖ್ ಪೊಲೀಸರ ವಿರುದ್ಧ ‘ಖಲಿಸ್ತಾನಿ’ ನಿಂದನೆ ಪ್ರಕರಣ: ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲು

ಕೋಲ್ಕತಾ: ಸಿಖ್ ಪೊಲೀಸ್ ಅಧಿಕಾರಿಯನ್ನು ‘ಖಲಿಸ್ತಾನಿ’ ಎಂದು ನಿಂದಿಸಿದ ಘಟನೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಪೊಲೀಸರು ಶುಕ್ರವಾರ ಬಿಜೆಪಿ ನಾಯಕರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಸಂದೇಶ್ ಖಾಲಿಗೆ ಬಿಜೆಪಿ ಮೆರವಣಿಗೆಯ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪೇಟ ಧರಿಸದಿದ್ದರೆ ಅವರನ್ನು “ಖಲಿಸ್ತಾನಿ” ಎಂದು ಕರೆಯಬಹುದೇ ಎಂದು ಪ್ರಶ್ನಿಸುವ ಐಪಿಎಸ್ ಅಧಿಕಾರಿಯ ವೀಡಿಯೊವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪೋಸ್ಟ್ ಮಾಡಿದ್ದರು.
ಪೊಲೀಸ್ ಅಧಿಕಾರಿಯನ್ನು 2016 ರ ಬ್ಯಾಚ್ ನ ಐಪಿಎಸ್ ಅಧಿಕಾರಿ ಜಸ್ಪ್ರೀತ್ ಸಿಂಗ್ ಎಂದು ಗುರುತಿಸಲಾಗಿದೆ. ಪ್ರಸ್ತುತ ಅವರನ್ನು ಪಶ್ಚಿಮ ಬಂಗಾಳ ಪೊಲೀಸ್‌ನಲ್ಲಿ ವಿಶೇಷ ಅಧೀಕ್ಷಕ (ಗುಪ್ತಚರ) ಆಗಿ ನೇಮಿಸಲಾಗಿದೆ.
ಸಿಖ್ ಪೊಲೀಸ್ ಅಧಿಕಾರಿಯ ವಿರುದ್ಧ ‘ಖಲಿಸ್ತಾನಿ’ ನಿಂದನೆಯನ್ನು ಬಳಸಿದ್ದು ಬಿಜೆಪಿ ನಾಯಕ ಸುವೇಂದು ಅಧಿಕಾರಿ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಪೊಲೀಸರು ಬುಧವಾರ ವೀಡಿಯೊವನ್ನು ಬಿಡುಗಡೆ ಮಾಡಿದ್ದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth