ಮದ್ಯ ಕುಡಿಸಿ ಯುವತಿಯ ಮೇಲೆ ಅತ್ಯಾಚಾರ: ಬಿಜೆಪಿ ಮುಖಂಡನ ವಿರುದ್ಧ ಎಫ್ ಐಆರ್ ದಾಖಲು
ಬೆಂಗಳೂರು: ಮದುವೆಗೆ ಸಾಲ ಕೊಡುವುದಾಗಿ ನಂಬಿಸಿ ಯುವತಿಯನ್ನು ಫ್ಲ್ಯಾಟ್ ಗೆ ಕರೆದೊಯ್ದು ಮದ್ಯ ಕುಡಿಸಿ ಅತ್ಯಾಚಾರ ನಡೆಸಿರುವ ಗಂಭೀರ ಆರೋಪ ಬಿಜೆಪಿ ಮುಖಂಡನೊಬ್ಬನ ವಿರುದ್ಧ ಕೇಳಿ ಬಂದಿದೆ.
ಬೆಂಗಳೂರಿನಲ್ಲಿ ಈ ಘಟನೆ ನಡೆದಿದೆ. ಬಿಜೆಪಿ ಮುಖಂಡ ಜಿಮ್ ಸೋಮ ಅಲಿಯಾಸ್ ಸೋಮಶೇಖರ್ ವಿರುದ್ಧ 26 ವರ್ಷದ ಯುವತಿ ನೀಡಿದ ದೂರಿನನ್ವಯ ಅಶೋಕನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಕಳೆದ ವರ್ಷ ಯುವತಿಗೆ ಮದುವೆ ಫಿಕ್ಸ್ ಆಗಿತ್ತು. ಸಂತ್ರಸ್ತ ಯುವತಿಯ ಸ್ನೇಹಿತ ಸೋಮಶೇಖರ್ ಗೆ ಯುವತಿಯನ್ನು ಪರಿಚಯಿಸಿದ್ದಳು. ತನ್ನ ಮದುವೆಗೆ 6 ಲಕ್ಷ ಸಹಾಯ ಮಾಡುವಂತೆ ಯುವತಿ ಕೇಳಿದ್ದಳು. ಹಣ ಕೊಡುವುದಾಗಿ ಲ್ಯಾಂಗ್ ಫೋರ್ಡ್ ರಸ್ತೆಯ ಫ್ಲ್ಯಾಟ್ ಗೆ ಕರೆದೊಯ್ದು ಆಕೆಗೆ ಬಲವಂತವಾಗಿ ಮದ್ಯ ಕುಡಿಸಿ ಅತ್ಯಾಚಾರ ನಡೆಸಿದ್ದು, ಬಳಿಕ ಈ ವಿಚಾರ ಯಾರಿಗಾದರೂ ಹೇಳಿದರೆ, ಪ್ರಾಣ ತೆಗೆಯುವುದಾಗಿಯೂ, ಮಾನ ಹರಾಜು ಹಾಕುವುದಾಗಿಯೂ ಬೆದರಿಕೆ ಹಾಕಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಘಟನೆ 3 ತಿಂಗಳ ಹಿಂದೆ ನಡೆದಿತ್ತು. ಆರೋಪಿ ಸೋಮಶೇಖರ್ ಸಕಲೇಶಪುರ ಕ್ಷೇತ್ರದಿಂದ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿ ಪರಾಜಯಗೊಂಡಿದ್ದ ಎನ್ನಲಾಗಿದೆ. ಸದ್ಯ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: