ತಿರುಮಲ ಲಡ್ಡು ಕೌಂಟರ್ ನಲ್ಲಿ ಬೆಂಕಿ!

ತಿರುಮಲ: ತಿರುಪತಿ ದೇವಸ್ಥಾನದಲ್ಲಿ ಟಿಕೆಟ್ ಕೌಂಟರ್ ನಲ್ಲಿ ಕಾಲ್ತುಳಿತದಿಂದ 6 ಜನ ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೀಗ ತಿರುಮಲ ಲಡ್ಡು ಕೌಂಟರ್ ನಲ್ಲಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾದ ಘಟನೆ ನಡೆದಿದೆ.
ನಿರಂತರ ವಿದ್ಯುತ್ ಸರಬರಾಜು ವ್ಯವಸ್ಥೆಯಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ, ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನೋಡಿ ಭಯಭೀತರಾದ ಭಕ್ತರು ಲಡ್ಡು ಕೌಂಟರ್ ನಿಂದ ಓಡಿ ಹೋಗಿ ಅಪಾಯದಿಂದ ತಪ್ಪಿಸಿಕೊಂಡಿದ್ದಾರೆ. ಸದ್ಯ ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ.
ಲಡ್ಡು ಕೌಂಟರ್ ಸಂಖ್ಯೆ 47ರಲ್ಲಿ ಈ ಘಟನೆ ಸಂಭವಿಸಿದೆ. ಬೆಂಕಿಯು ಕಂಪ್ಯೂಟರ್ ಸೆಟಪ್ ಗೆ ಲಿಂಗ್ ಮಾಡಲಾದ ಯುಪಿಎಸ್ ನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ ಎನ್ನಲಾಗಿದೆ.
ಬೆಂಕಿ ಹರಡುತ್ತಿದ್ದಂತೆಯೇ ಗಮನಿಸಿದ ಭಕ್ತರು ಕೌಂಟರ್ ನಿಂದ ಓಡಿ ಹೋದರು. ತಕ್ಷಣವೇ ಎಚ್ಚೆತ್ತುಕೊಂಡ ಸಿಬ್ಬಂದಿ ಬೆಂಕಿಯನ್ನು ಆರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: