ತಿರುಪತಿಯ ಅಂಗಡಿಯೊಂದರಲ್ಲಿ ಬೆಂಕಿ ಅವಘಡ

ಅಂಗಡಿಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ ಘಟನೆ ಆಂಧ್ರಪ್ರದೇಶದ ತಿರುಪತಿಯ ಗೋವಿಂದರಾಜ ಸ್ವಾಮಿ ದೇವಸ್ಥಾನದ ಬಳಿ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ದೇವಸ್ಥಾನದ ಸಮೀಪ ಇರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತು.
ದೇಗುಲದ ಬಳಿಯಲ್ಲಿ ಇರುವ ಕಟ್ಟಡ ಧಗಧಗನೆ ಉರಿಯಿತು. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಬೆಂಕಿಯಿಂದ 6 ಬೈಕ್ ಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅಕ್ಕಪಕ್ಕದಲ್ಲಿದ್ದ 6 ಅಂಗಡಿಗಳಿಗೂ ಬೆಂಕಿಯಿಂದ ಹಾನಿಯಾಗಿದೆ.
ನಾಲ್ಕು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿದ್ದು ಗೋವಿಂದರಾಜ ಸ್ವಾಮಿ ದೇವಸ್ಥಾನದ ರಥದ ಕಡೆಗೆ ವ್ಯಾಪಿಸಿರುವ ಬೆಂಕಿಯನ್ನು ನಂದಿಸಲು ಪ್ರಯತ್ನಿಸಿತು.
ಪ್ರಸಿದ್ಧ ದೇವಸ್ಥಾನದ ಪಕ್ಕದಲ್ಲಿರುವ ಲಾವಣ್ಯ ಫೋಟೋ ಫ್ರೇಮ್ ವರ್ಕ್ಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಐದು ಅಂತಸ್ತಿನ ಕಟ್ಟಡದಲ್ಲಿ ಒಂದು ಮಹಡಿಯಲ್ಲಿರುವ ಫೋಟೋ ಫ್ರೇಮ್ ಅಂಗಡಿಯಲ್ಲಿ ಮೊದಲಿಗೆ ಬೆಂಕಿ ಹತ್ತಿಕೊಂಡಿದೆ. ಅಂಗಡಿಯಲ್ಲಿದ್ದ ಕಾರ್ಮಿಕರು ಮತ್ತು ಕಟ್ಟಡದಲ್ಲಿದ್ದ ಇತರ ಜನರು ಸುರಕ್ಷಿತವಾಗಿ ಹೊರಗೆ ಓಡಿದ್ದಾರೆ.
ಲ್ಯಾಮಿನೇಶನ್ ಹಾಗೂ ಇತರೆ ಫೋಟೋ ಸಂಬಂಧಿತ ಕೆಲಸಗಳಿಗಾಗಿ ಅಂಗಡಿಯಲ್ಲಿ ಸಂಗ್ರಹಿಸಿಟ್ಟಿದ್ದ ರಾಸಾಯನಿಕಗಳಿಂದ ಬೆಂಕಿ ಮತ್ತಷ್ಟು ಹೊತ್ತಿಕೊಂಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw