ನಾಲ್ವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ: ರಸ್ತೆ ಮಧ್ಯೆಯೇ ಕಾರು ಸುಟ್ಟು ಕರಕಲು - Mahanayaka

ನಾಲ್ವರು ಪ್ರಯಾಣಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ: ರಸ್ತೆ ಮಧ್ಯೆಯೇ ಕಾರು ಸುಟ್ಟು ಕರಕಲು

manglore
08/04/2024


Provided by

ಮಂಗಳೂರು: ಚಲಿಸುತ್ತಿದ್ದ ಕಾರೊಂದಕ್ಕೆ ಏಕಾಏಕಿ ಬೆಂಕಿ ಹತ್ತಿಕೊಂಡಿರುವ ಆಘಾತಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ — ಮೂಡುಬಿದಿರೆ ರಸ್ತೆಯ ಕುದ್ಕೋಳಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ.

ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬ್ರೇಕ್ ಹಾಕಿದರೂ ಕಾರು ನಿಂತಿರಲಿಲ್ಲ, ಕೊನೆಗೆ ಚಾಲಕನ ಸಮಯ ಪ್ರಜ್ಞೆಯಿಂದ ಕಾರು ನಿಂತಿದೆ. ತಕ್ಷಣವೇ ಕಾರಿನಲ್ಲಿದ್ದವರು ಕೆಳಗೆ ಇಳಿದಿದ್ದು, ಹೀಗಾಗಿ ಯಾವುದೇ ಪ್ರಾಣಾಪಾಯವಿಲ್ಲದೇ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಪಾರಾಗಿದ್ದಾರೆ.

ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಎಂಬವರಿಗೆ ಸೇರಿದ ಕಾರು ಇದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ ಎಂದು ಹೇಳಲಾಗಿದೆ.

ಕಾರಿಗೆ ಬೆಂಕಿ ಹತ್ತಿಕೊಂಡಿರುವುದನ್ನು ಕಂಡು ಸ್ಥಳೀತರು ಹಾಗೂ ಬಂಟ್ವಾಳ ಅಗ್ನಿಶಾಮಕದಳದ ಸಿಬ್ಬಂದಿ ತಕ್ಷಣವೇ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ.

ಘಟನೆಯಿಂದಾಗಿ ಸುಮಾರು ಒಂದು ತಾಸುಗಳವರೆಗೆ ಬಂಟ್ವಾಳ–ಮೂಡುಬಿದಿರೆ ರಸ್ತೆ ಸಂಚಾರ ಸ್ಥಗಿತಗೊಂಡಿತ್ತು.

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

 

ಇತ್ತೀಚಿನ ಸುದ್ದಿ