ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ದುರಂತ: ಪ್ರಾಣ ಕಳೆದುಕೊಂಡ 9 ಕಾರ್ಮಿಕರು

17/02/2024
ತಮಿಳುನಾಡಿನ ವಿರುದುನಗರ ಜಿಲ್ಲೆಯ ವೆಂಬಕೊಟ್ಟೈನಲ್ಲಿರುವ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಭಾರೀ ಸ್ಫೋಟದಲ್ಲಿ ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿ, ಹಲವರು ಗಾಯಗೊಂಡ ದಾರುಣ ಘಟನೆ ನಡೆದಿದೆ.
ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಸಮೀಪದಲ್ಲಿದ್ದ ನಾಲ್ಕು ಕಟ್ಟಡಗಳು ಹಾನಿಗೀಡಾಗಿದೆ. ಮಾಹಿತಿ ಪಡೆದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳವು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ವರದಿಯ ಪ್ರಕಾರ, ಏಳು ಜನ ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಸಾವನ್ನಪ್ಪಿದ್ದಾರೆ.
ಇನ್ನೂ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ AMMK ನಾಯಕ ಟಿಟಿವಿ ದಿನಕರನ್, “ಅಪಾಯಕಾರಿ ಪಟಾಕಿ ಉದ್ಯಮ” ದಲ್ಲಿ ತೊಡಗಿರುವ ಎಲ್ಲರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.