ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ: ಸೆಲ್ಸ್ ಗರ್ಲ್ ಸುಟ್ಟು ಕರಕಲು
ಬೆಂಗಳೂರು: ಎಲೆಕ್ಟ್ರಿಕ್ ಸ್ಕೂಟರ್ ಶೋರೂಂನಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಶೋರೂಂನೊಳಗೆ ಸಿಲುಕಿದ್ದ ಸೇಲ್ಸ್ ಗರ್ಲ್ ಆಗಿ ಕೆಲಸ ಮಾಡುತ್ತಿದ್ದ ಯುವತಿ ದಾರುಣವಾಗಿ ಸಾವನ್ನಪ್ಪಿದ್ದಾಳೆ.
ಪ್ರಿಯಾ(20) ಸಾವನ್ನಪ್ಪಿದ್ದ ಯುವತಿ ಎಂದು ಗುರುತಿಸಲಾಗಿದೆ. ಇಂದು ಸಂಜೆ 5:30ರ ವೇಳೆಗೆ ಈ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಶೋರೂಂಗೆ ಬೆಂಕಿ ಹತ್ತಿಕೊಂಡಿದ್ದು, ಇಡೀ ಶೋರೂಂಗೆ ಬೆಂಕಿ ಹಬ್ಬಿದ್ದು ಎಲೆಕ್ಟ್ರಿಕಲ್ ಸ್ಕೂಟರ್ ಗಳು ಸುಟ್ಟು ಭಸ್ಮವಾಗಿದೆ.
ಸೇಲ್ಸ್ ಗರ್ಲ್ ಪ್ರಿಯಾ ಶೋರೂಂನಿಂದ ಹೊರ ಬರಲು ಸಾಧ್ಯವಾಗದೇ ಬೆಂಕಿಯ ನಡುವೆ ಸಿಲುಕಿದ್ದು, ಸುಟ್ಟು ಕರಕಲಾಗಿದ್ದಾಳೆ. ಶೋರೂಂನಲ್ಲಿದ್ದ 45ಕ್ಕೂ ಹೆಚ್ಚು ಸ್ಕೂಟರ್ ಗಳು ಬೆಂಕಿಗೆ ಆಹುತಿಯಾಗಿವೆ. ಇನ್ನು ಸ್ಥಳಕ್ಕೆ ರಾಜಾಜಿನಗರ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97