ದೀಪಾವಳಿ: ಕೇವಲ 2 ಗಂಟೆಗಳ ಕಾಲ ಮಾತ್ರ ಪಟಾಕಿ ಸಿಡಿಸಲು ಅವಕಾಶ
ಬೆಂಗಳೂರು : ದೀಪಾವಳಿ ಹಬ್ಬದಲ್ಲಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಪಟಾಕಿ ಸಿಡಿಸಲು ಅವಕಾಶವಿದೆ ಎಂದು ಅರಣ್ಯ ಇಲಾಖೆಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಈಶ್ವರ ಖಂಡ್ರೆ, ರಾತ್ರಿ 8ರಿಂದ 10 ಗಂಟೆಯವರೆಗೆ ಮಾತ್ರ ಪಟಾಕಿ ಸಿಡಿಸಬಹುದು. ಅದು ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶವಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ ನಿಂದ ನಿರ್ದೇಶನವಿದೆ ಎಂದು ಹೇಳಿದರು.
ಕತ್ತಲೆಯಿಂದ ಬೆಳಕಿನತ್ತ ಹೋಗುವಾಗ ಪರಿಸರ ಮಾಲಿನ್ಯ ಬೇಡ. ರಾಸಾಯನಿಕವಲ್ಲದ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಈ ಬಗ್ಗೆ ಪಟಾಕಿ ಮಾರಾಟಗಾರರಿಂದಲೂ ಮುಚ್ಚಳಿಕೆ ಬರೆಸಿಕೊಳ್ಳಲಾಗಿದೆ ಎಂದು ಹೇಳಿದರು.
ಪಟಾಕಿ ಸಿಡಿಸುವುದರಿಂದ ಅಪಾಯಗಳು ಸಂಭವಿಸುತ್ತವೆ. ಕೆಲವೆಡೆ ಜೀವಹಾನಿಯಾಗಿದೆ. ಮಕ್ಕಳು ಕಣ್ಣು ಕೂಡ ಕಳೆದುಕೊಂಡಿದ್ದಾರೆ. ಪಟಾಕಿ ಸಿಡಿಸುವುದರಿಂದ ದೊಡ್ಡ ಪ್ರಮಾಣದಲ್ಲಿ ಪರಿಸರ ಹಾನಿಯಾಗುತ್ತದೆ ಎಂದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: