ಪಟಾಕಿ ಸಿಡಿಸಲು 8ರಿಂದ 10ರವರೆಗೆ ಮಾತ್ರವೇ ಅವಕಾಶ - Mahanayaka

ಪಟಾಕಿ ಸಿಡಿಸಲು 8ರಿಂದ 10ರವರೆಗೆ ಮಾತ್ರವೇ ಅವಕಾಶ

fireworks
26/10/2024


Provided by

ಬೆಂಗಳೂರು : ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಬಾರಿ ದೀಪಾವಳಿಗೆ ಕೇವಲ ಹಸಿರು ಪಟಾಕಿ ಮಾತ್ರವೇ ಸಿಡಿಸಬೇಕು. ರಾತ್ರಿ 8ರಿಂದ 10ರವರೆಗೆ ಮಾತ್ರವೇ ಪಟಾಕಿ ಸಿಡಿಸಲು ಅವಕಾಶ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಗೃಹಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಈಗಾಗಲೇ ಹೇಳಿದೆ. ಕೇವಲ ಹಸಿರು ಪಟಾಕಿ ಮಾತ್ರ ಸಿಡಿಸಬೇಕು ಇದರಿಂದ ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಈ ಒಂದು ಆದೇಶ ನೀಡಿದೆ. ಹಾಗಾಗಿ ರಾತ್ರಿ 8 ಗಂಟೆಯಿಂದ 10 ಗಂಟೆವರೆಗೆ ಮಾತ್ರ ಹಸಿರು ಪಟಾಕಿ ಸಿಡಿಸಲು ಅವಕಾಶವಿದೆ ಎಂದರು.

ಇನ್ನು ಎಲ್ಲಾ ಜಿಲ್ಲೆಗಳ ಡಿಸಿಗಳಿಗೆ ಸಿಇಓ ಗಳಿಗೆ ಸೂಚನೆ ನೀಡಿದ ಅವರು, ಪಟಾಕಿ ಸಿಡಿಸುವ ಸಂದರ್ಭದಲ್ಲಿ ಯಾವುದೇ ಸಾವು ನೋವುಗಳಾಗದಂತೆ ಹಾಗೂ ಆರೋಗ್ಯ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿಗಳು ಕಂಡುಬಂದಲ್ಲಿ ಅಂತಹ ಪಟಾಕಿ ಮಾಲೀಕರ ಗೋದಾಮಿನ ಮೇಲೆ ದಾಳಿ ಮಾಡಿ, ಮಾಲೀಕರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ