ಈ ರಾಜ್ಯದಲ್ಲಿ ದೀಪಾವಳಿಗೆ ಪಟಾಕಿ ನಿಷೇಧ | ಕಾರಣ ಏನು ಗೊತ್ತಾ? - Mahanayaka
12:06 AM Wednesday 10 - December 2025

ಈ ರಾಜ್ಯದಲ್ಲಿ ದೀಪಾವಳಿಗೆ ಪಟಾಕಿ ನಿಷೇಧ | ಕಾರಣ ಏನು ಗೊತ್ತಾ?

03/11/2020

ಕೋಲ್ಕತಾ: ಕೊರೊನಾ ವೈರಸ್ ತೀವ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಾಳಿ ಪೂಜೆ ಹಾಗೂ ದೀಪಾವಳಿಗೆ ಪಟಾಕಿ ಸಿಡಿಸುವುದನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿದೆ.


ಪಶ್ಚಿಮ ಬಂಗಾಳ ಮುಖ್ಯ ಕಾರ್ಯದರ್ಶಿ ಅಲಪನ್ ಬಂಡ್ಯೋಪಾಧ್ಯಾಯ ಅವರು ಮಂಗಳವಾರ ಈ ವಿಚಾರ ತಿಳಿಸಿದ್ದಾರೆ. ಕೋವಿಡ್-19 ರೋಗಿಗಳಿಗೆ ಅಪಾಯಕಾರಿಯಾದ ವಾಯು ಮಾಲಿನ್ಯವನ್ನು ತಡೆಯಲು ಕಾಳಿ ಪೂಜಾ ಮತ್ತು ದೀಪಾವಳಿ ಹಬ್ಬಗಳಲ್ಲಿ ಪಟಾಕಿ ಸಿಡಿಸಲು ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನೀಡುವುದಿಲ್ಲ ಎಂದು ಅವರು ತಿಳಿಸಿದರು.


ಕೊರೊನಾ ಸೋಂಕಿಗೆ ತುತ್ತಾದ ರೋಗಿಗಳಲ್ಲಿ  ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಟಾಕಿಯು ಆರೋಗ್ಯಕ್ಕೆ ಹಾನಿಕಾರಕವಾಗಿದೆ ಮತ್ತು ವ್ಯಕ್ತಿ ಅಂತರ ಕಾಪಾಡುವ ನಿಟ್ಟಿನಲ್ಲಿ ಕಾಳಿ ಪೂಜೆಯನ್ನು ನಿಷೇಧಿಸಲಾಗಿದೆ ಎಂದು ಸರ್ಕಾರ ಹೇಳಿದೆ.


ಇತ್ತೀಚಿನ ಸುದ್ದಿ