ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಗಲಾಟೆ! - Mahanayaka
1:45 PM Thursday 12 - September 2024

ಗಣಪತಿ ವಿಸರ್ಜನೆ ವೇಳೆ ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಗಲಾಟೆ!

bhadrawati
22/09/2023

ಶಿವಮೊಗ್ಗ: ಗಣಪತಿ ವಿಸರ್ಜನೆ ಮೆರವಣಿಗೆ ಮಸೀದಿ ಮುಂಭಾಗದಲ್ಲಿ ಸಾಗುತ್ತಿದ್ದ ವೇಳೆ ಪಟಾಕಿ ಸಿಡಿಸಲಾಗಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಅನ್ಯಕೋಮಿನ ಯುವಕರು ಆಕ್ರೋಶ  ವ್ಯಕ್ತಪಡಿಸಿದ್ದು, ಪರಿಣಾಮವಾಗಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದ ಘಟನೆ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ನಡೆದಿದೆ.

ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂಭಾಗದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.  ಮೆರವಣಿಗೆಯ ವೇಳೆ  ಮಸೀದಿ ಮುಂಭಾಗದಲ್ಲಿ ಪಟಾಕಿ ಹಚ್ಚಿದ್ದಾರೆ ಎಂದು ಅನ್ಯಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆನ್ನಲಾಗಿದೆ.

ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದು, ಪ್ರತಿಭಟನಾಕಾರರ ಜೊತೆಗೆ ಮಾತನಾಡಿ ಮನವೊಲಿಸಿದರು. ಈ ವೇಳೆ ಪಟಾಕಿ ಹಚ್ಚಿ ಗಲಭೆ ಸೃಷ್ಟಿಸಲು ಯತ್ನಿಸಿದವರ ವಿರುದ್ಧ ಕ್ರಮಕೈಗೊಳ್ಳುವಂತೆ ಮುಸ್ಲಿಮ್ ಮುಖಂಡರು ಒತ್ತಾಯಿಸಿದರು.


Provided by

ಇತ್ತೀಚಿನ ಸುದ್ದಿ