ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ‘ಫೈರ್ ಫ್ಲೈ’ ಆಡಿಯೋ ರೈಟ್ಸ್ ದಾಖಲೆ ಮೊತ್ತಕ್ಕೆ ಮಾರಾಟ
ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಚೊಚ್ಚಲ ಚಿತ್ರ ‘ಫೈರ್ ಫ್ಲೈ’ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಆನಂದ್ ಆಡಿಯೋ ಸಂಸ್ಥೆ ‘ಫೈರ್ ಫ್ಲೈ’ ಆಡಿಯೋ ಹಕ್ಕನ್ನು ಪಡೆದುಕೊಂಡಿದೆ.
ವಂಶಿ ಚೊಚ್ಚಲ ಬಾರಿಗೆ ನಿರ್ದೇಶಿಸಿ ನಟಿಸುತ್ತಿರುವ ‘ಫೈರ್ ಫ್ಲೈ’ ಸಿನಿಮಾಗೆ ಚರಣ್ ರಾಜ್ ಅದ್ಭುತ ಸಂಗೀತ ನೀಡಿದ್ದಾರೆ. ಈ ಚಿತ್ರದಲ್ಲಿ ಹೆಸರಾಂತ ತಾರೆಯರು ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಅಚ್ಯುತ್ ಕುಮಾರ್ ಹಾಗೂ ಸುಧಾರಾಣಿ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ.
‘ಫೈರ್ ಫ್ಲೈ’ ಸಿನಿಮಾದಲ್ಲಿ ವಂಶಿ ನಿರ್ದೇಶಿಸಿ ತಾನೇ ನಾಯಕ ನಟನಾಗಿ ಪಾತ್ರವಹಿಸುತ್ತಿದ್ದಾರೆ. ಲವ್ ಮಾಕ್ಟೈಲ್ ಚಿತ್ರದ ನಟಿ ರಚನಾ ಇಂದರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಜಯರಾಮ್ ಅವರು ಸಹ ನಿರ್ದೇಶನ ಮಾಡುತ್ತಿದ್ದಾರೆ. ಅಭಿಲಾಷ್ ಕಳತ್ತಿ ಅವರ ಛಾಯಾಗ್ರಹಣ, ಚರಣ್ ರಾಜ್ ಅವರ ಸಂಗೀತ ನಿರ್ದೇಶನ, ರಘು ನಿಡುವಳ್ಳಿ ಅವರ ಸಂಭಾಷಣೆ ನೀಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA