ಪಟಾಕಿ ದುರಂತ: ಮೃತರ ಕುಟುಂಬಕ್ಕೆ 3 ಲಕ್ಷ ರೂ. ಪರಿಹಾರ ಘೋಷಿಸಿದ ತಮಿಳುನಾಡು ಸರ್ಕಾರ!

08/10/2023
ಬೆಂಗಳೂರು: ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ನಡೆದ ಭೀಕರ ಪಟಾಕಿ ದುರಂತದಲ್ಲಿ ಮೃತಪಟ್ಟ ತಮಿಳುನಾಡು ಮೂಲದ 14 ಮಂದಿ ಕಾರ್ಮಿಕರ ಕುಟುಂಬಸ್ಥರಿಗೆ ತಮಿಳುನಾಡು ಸರ್ಕಾರ 3 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದೆ.
ತಮಿಳುನಾಡಿನ ಆರೋಗ್ಯ ಮತ್ತು ಆಹಾರ ಸಚಿವರು ಹಾಗೂ ಜನಪ್ರತಿನಿಧಿಗಳು ಅತ್ತಿಬೆಲೆ ಆಕ್ಸ್ ಫರ್ಡ್ ಆಸ್ಪತ್ರೆಗೆ ಆಗಮಿಸುತ್ತಿದ್ದಾರೆ. ಮೃತರ ಕುಟುಂಬಸ್ಥರು ಆಸ್ಪತ್ರೆ ಬಳಿ ಜಮಾಯಿಸಿದ್ದು ಅವರ ರೋದನೆ ಮುಗಿಲು ಮುಟ್ಟಿದೆ.
ಕರ್ನಾಟಕ ಸರ್ಕಾರದಿಂದ 5 ಲಕ್ಷ ಪರಿಹಾರ:
ಅತ್ತಿಬೆಲೆ ಪಟಾಕಿ ದುರಂತದಲ್ಲಿ ಮಡಿದ ಕಾರ್ಮಿಕರ ಕುಟುಂಬಕ್ಕೆ ಕರ್ನಾಟಕ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಈ ನಡುವೆ ತಮಿಳುನಾಡು ಸರ್ಕಾರ ಕೂಡ 3 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದ್ರೆ, ಈ ಪರಿಹಾರ ಸಾಲದು ಪರಿಹಾರ ಮೊತ್ತವನ್ನು ಹೆಚ್ಚಿಸಿ ಮೃತರ ಕುಟುಂಬಕ್ಕೆ ನ್ಯಾಯ ನೀಡಬೇಕು, ಮೃತರ ಕುಟುಂಬಸ್ಥರಿಗೆ ಉದ್ಯೋಗ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ.