ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಮೊದಲ ಶಾಸಕಾಂಗ ಸಭೆ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು - Mahanayaka
5:36 PM Thursday 10 - September 2026

ಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಮೊದಲ ಶಾಸಕಾಂಗ ಸಭೆ: ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಅತೃಪ್ತ ಶಾಸಕರು ಗೈರು

d k shivakumar.jpg
19/08/2026

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮಂಗಳವಾರ ತಮ್ಮ ಮೊದಲ ಕಾಂಗ್ರೆಸ್ ಶಾಸಕಾಂಗ ಪಕ್ಷದ (ಸಿಎಲ್ ಪಿ) ಸಭೆ ನಡೆಸಿದರು. ಆದರೆ, ಈ ಪ್ರಮುಖ ಸಭೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ಅತೃಪ್ತ ಶಾಸಕರು ಗೈರುಹಾಜರಾಗಿದ್ದರು.

ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಸಭೆಯಲ್ಲಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಒಗ್ಗಟ್ಟಿನಿಂದ ಎದುರಿಸುವಂತೆ ಶಾಸಕರಿಗೆ ಕರೆ ನೀಡಿದರು. “ಸದನದಲ್ಲಿ ಪ್ರತಿಪಕ್ಷಗಳ ಆರೋಪಗಳಿಗೆ ಸರಿಯಾಗಿ ತಿರುಗೇಟು ನೀಡಿ. ಬಿಜೆಪಿ ಸರ್ಕಾರದ ಅವಧಿಯ ಹಗರಣಗಳನ್ನು ಕೆದಕಿ ಕೌಂಟರ್ ಕೊಡಿ” ಎಂದು ತಾಕೀತು ಮಾಡಿದರು.

ಸಚಿವ ಬಿ. ನಾಗೇಂದ್ರ ಅವರ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಅವರನ್ನು ಬಿಟ್ಟುಕೊಡಬಾರದು, ಸಚಿವರಿಗೆ ಎಲ್ಲರೂ ಬೆಂಬಲವಾಗಿ ನಿಂತು ಸರ್ಕಾರದ ಪರ ಸಮರ್ಥನೆ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಸಂಪುಟ ವಿಸ್ತರಣೆಯಲ್ಲಿ ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಾಗಲಿಲ್ಲ ಎಂಬ ಬೇಸರ ನನಗೂ ಇದೆ ಎಂದು ಸಿಎಂ ಹೇಳಿದರು. “ನನಗೂ ಹಿಂದೆ ಮಂತ್ರಿ ಪದವಿ ಸಿಗದಿದ್ದಾಗ ನಾನು ಕೇಳಲಿಲ್ಲ, ಆದರೆ ಪಕ್ಷಕ್ಕೆ ನಿಷ್ಠೆಯಿಂದ ಕೆಲಸ ಮಾಡಿದೆ. ಅರ್ಹರಿದ್ದರೂ ಎಲ್ಲರಿಗೂ ಸಚಿವ ಸ್ಥಾನ ನೀಡಲು ಆಗಲಿಲ್ಲ, ಅದಕ್ಕಾಗಿ ಕ್ಷಮಿಸಿ” ಎಂದು ವಿನಂತಿಸಿದರು.

ಪ್ರತಿ ತಿಂಗಳು ಶಾಸಕರ ಭೇಟಿಗೆ 2 ದಿನ ಮೀಸಲಿಡಲಾಗುವುದು ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಲಾಗುವುದು ಎಂದು ಶಾಸಕರಿಗೆ ಭರವಸೆ ನೀಡಿದರು.
ಸಭೆಯ ದಿನ ಬೆಂಗಳೂರಿನ ತಮ್ಮ ನಿವಾಸದಲ್ಲೇ ಇದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಸಿಎಲ್ ಪಿ ಸಭೆಗೆ ಹಾಜರಾಗಲಿಲ್ಲ. ಸಿದ್ದರಾಮಯ್ಯ ಅವರ ಅಸಮಾಧಾನವೇ ಇದಕ್ಕೆ ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಅಷ್ಟೇ ಅಲ್ಲದೆ, ಸಚಿವ ಸ್ಥಾನ ಸಿಗದ ಕಾರಣಕ್ಕೆ ಬೇಸರಗೊಂಡಿರುವ ಪ್ರಮುಖ ಶಾಸಕರಾದ ಹೆಚ್.ಸಿ. ಮಹದೇವಪ್ಪ, ಶಿವಾನಂದ ಪಾಟೀಲ್, ಎಂ. ಕೃಷ್ಣಪ್ಪ, ಪ್ರಿಯಾ ಕೃಷ್ಣ, ಎಂ.ಸಿ. ಸುಧಾಕರ್, ಎಸ್.ಎನ್. ನಾರಾಯಣಸ್ವಾಮಿ ಮತ್ತು ಕೊತ್ತನೂರು ಮಂಜುನಾಥ್ ಅವರೂ ಸಹ ಈ ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

 

ಇತ್ತೀಚಿನ ಸುದ್ದಿ

mobil chat sitesi Ucuz Uçak Bileti