ಮಾನವ ರಹಿತ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ TV-D1 ರಾಕೆಟ್‌ ಉಡಾವಣೆ ಯಶಸ್ವಿ!: ಇದರ ವಿಶೇಷತೆ ಏನು ಗೊತ್ತಾ? - Mahanayaka

ಮಾನವ ರಹಿತ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ TV–D1 ರಾಕೆಟ್‌ ಉಡಾವಣೆ ಯಶಸ್ವಿ!: ಇದರ ವಿಶೇಷತೆ ಏನು ಗೊತ್ತಾ?

TV D1
21/10/2023


Provided by

ಬೆಂಗಳೂರು: 3 ಬಾರಿ ವಿಫಲವಾದ ಬಳಿಕ ಮತ್ತೊಮ್ಮೆ ರಾಕೆಟ್ ಉಡಾವಣೆಗೆ ಪ್ರಯತ್ನಿಸಿದ ಇಸ್ರೋ, ತಾಂತ್ರಿಕ ದೋಷ ಸರಿಪಡಿಸಿದ ನಂತರ ಬೆಳಗ್ಗೆ 10 ಗಂಟೆ ವೇಳೆಗೆ TV-D1 ರಾಕೆಟ್‌ ಉಡಾವಣೆ ಮಾಡಲಾಯಿತು. ಯಶಸ್ವಿಯಾಗಿ ಹಾರಾಟ ನಡೆಸಿದ, ರಾಕೆಟ್‌ ಸೇಫ್‌ ಲ್ಯಾಂಡಿಂಗ್‌ ಆಗಿದೆ ಎಂದು ಇಸ್ರೋ ಮಾಹಿತಿ ಹಂಚಿಕೊಂಡಿದೆ

ಮಾನವಸಹಿತ ಗಗನಯಾನ ಸಿದ್ಧತೆಯ ಭಾಗವಾಗಿ, ಶನಿವಾರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ನಡೆಸಿದ ಮಾನವ ರಹಿತ ಮೊದಲ ಪ್ರಾಯೋಗಿಕ ಪರೀಕ್ಷಾರ್ಥ ವಾಹನ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಪರೀಕ್ಷೆಗೆ TV-D1 ಎಂದು ಹೆಸರಿಸಲಾಗಿದೆ. ಇಂತಹ ಉದ್ದೇಶಿತ ಮೂರು ಪರೀಕ್ಷೆಗಳಲ್ಲಿ ಇದು ಮೊದಲನೆಯದ್ದಾಗಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಏಕ ಹಂತದ ರಾಕೆಟ್ ʻಟಿವಿ-ಡಿ1ʼ ನಭಕ್ಕೆ ಚಿಮ್ಮಿದ್ದು, ಪ್ರಾಯೋಗಿಕ ಪರೀಕ್ಷೆಯಲ್ಲಿ ಯಶಸ್ಸು ಕಂಡಿದೆ. TV-D1 ಪರೀಕ್ಷಾರ್ಥ ಹಾರಾಟವು ಗಗನಯಾನ ಮಿಷನ್‌ನ ನಿರ್ಣಾಯಕ ಭಾಗವಾಗಿದೆ. ಇದು ಮೂರು ವ್ಯಕ್ತಿಗಳ ಸಿಬ್ಬಂದಿಯನ್ನು 3 ದಿನಗಳ ಕಾರ್ಯಾಚರಣೆಗಾಗಿ 400 ಕಿಲೋಮೀಟರ್ ಕಕ್ಷೆಗೆ ಕಳುಹಿಸುವುದು, ಈ ಮೂಲಕ ಹಿಂದೂ ಮಹಾಸಾಗರದ ನೀರಿನಲ್ಲಿ ಸೇಫ್ ಲ್ಯಾಂಡಿಂಗ್ ಮತ್ತು ಅವರ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳುವುದು ಇದರೊಂದಿಗೆ ಮಾನವಸಹಿತ ಬಾಹ್ಯಾಕಾಶ ಯಾನಕ್ಕೆ ಭಾರತದ ಸಾಮರ್ಥ್ಯ ಪ್ರದರ್ಶಿಸುವ ಗುರಿಯನ್ನು ಹೊಂದಿದೆ.

ಇಂದು ಬೆಳಗ್ಗೆ 8:45 ಗಂಟೆಗೆ ಮಾನವರಹಿತ ಪರೀಕ್ಷಾರ್ಥ ವಾಹನ ಉಡಾವಣೆಗೆ ಇಸ್ರೋ ಸಜ್ಜಾಗಿತ್ತು. ಅದಕ್ಕೂ ಮುನ್ನ 8:30 ಗಂಟೆಗೆ ಉಡ್ಡಯನಕ್ಕೆ ಇಸ್ರೋ ಸಮಯ ನಿಗದಿಪಡಿಸಿತ್ತು, ಆದ್ರೆ ಹವಾಮಾನ ವೈಪರಿತ್ಯದಿಂದ ಸಮಯ ಬದಲಾವಣೆ ಮಾಡಲಾಗಿತ್ತು. ಕೊನೇ ಕ್ಷಣದಲ್ಲಿ ಇಂಜಿನ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಕೆಲಕಾಲ ಸ್ಥಗಿತಗೊಳಿಸಲಾಗಿತ್ತು. ತಾಂತ್ರಿಕ ದೋಷ ಸರಿಪಡಿಸಿದ ಬಳಿಕ ಯಶಸ್ವಿಯಾಗಿ ಪರೀಕ್ಷಾರ್ಥ ಹಾರಾಟಕ್ಕೆ ರಾಕೆಟ್‌ ಉಡಾವಣೆ ಮಾಡಲಾಯಿತು.

TV-D ವಾಹನವು ಮಾರ್ಪಡಿಸಿದ ವಿಕಾಸ್ (VIKAS) ಎಂಜಿನ್ ಒಳಗೊಂಡಿದ್ದು, ಕ್ರ‍್ಯೂ ಮಾಡ್ಯೂಲ್ ಮತ್ತು ಕ್ರ‍್ಯೂ ಎಸ್ಕೇಪ್ ಸಿಸ್ಟಂ ಅನ್ನು ಬಳಸುತ್ತದೆ. ಇದು 34.9 ಮೀಟರ್ ಎತ್ತರದಲ್ಲಿದೆ ಮತ್ತು 44 ಟನ್‌ ಗಳಷ್ಟು ತೂಕ ಹೊಂದಿದೆ. ಒಂದು ವೇಳೆ ಈ ಮಿಷನ್ ಯಶಸ್ವಿಯಾದಲ್ಲಿ ಮಾನವಸಹಿತ ಬ್ಯಾಹ್ಯಾಕಾಶ ನೌಕೆಯನ್ನು ಉಡಾವಣೆ ಮಾಡುವ ಸಾಮರ್ಥ್ಯವಿರುವ ರಾಷ್ಟ್ರಗಳ ಪಟ್ಟಿಗೆ ಭಾರತ ಸೇರಲಿದೆ.

ಇತ್ತೀಚಿನ ಸುದ್ದಿ