ಚಿಕ್ಕಮಗಳೂರಿನಲ್ಲಿ ಡೆಂಗ್ಯೂಗೆ ಮೊದಲ ಬಲಿ: ಸಹನಾ ಬಾನು ಎಂಬ ವಿದ್ಯಾರ್ಥಿನಿ ಸಾವು - Mahanayaka
1:14 AM Tuesday 16 - September 2025

ಚಿಕ್ಕಮಗಳೂರಿನಲ್ಲಿ ಡೆಂಗ್ಯೂಗೆ ಮೊದಲ ಬಲಿ: ಸಹನಾ ಬಾನು ಎಂಬ ವಿದ್ಯಾರ್ಥಿನಿ ಸಾವು

sahana banu
08/02/2024

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಡೆಂಗ್ಯೂ ಮೊದಲ ಬಲಿ ಪಡೆದಿದ್ದು, ಡೆಂಗ್ಯೂನಿಂದ ಬಳಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿಯೊಬ್ಬರು ಕೊನೆಯುಸಿರೆಳೆದಿದ್ದಾರೆ.


Provided by

ಚಿಕ್ಕಮಗಳೂರು ನಗರದ ಮಹಮ್ಮದ್ ಖಾನ್ ಗಲ್ಲಿ ನಿವಾಸಿ ಸಹನಾ ಬಾನು (18) ಡೆಂಗ್ಯೂಗೆ ಬಲಿಯಾದ ವಿದ್ಯಾರ್ಥಿನಿಯಾಗಿದ್ದಾರೆ. ಇವರು ಕಾಲೇಜು ಶಿಕ್ಷಣ ಪಡೆಯುತ್ತಿದ್ದರು.

ಡೆಂಗ್ಯೂನಿಂದ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹರಾ ಬಾನು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ನಗರದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ ಆತಂಕ ಸೃಷ್ಟಿಸಿದೆ.

ಇತ್ತೀಚಿನ ಸುದ್ದಿ