ಚಿಕ್ಕಬಳ್ಳಾಪುರ ಜಿಲ್ಲೆಗೆ ಕೆ.ಪಿ.ಸಿ.ಸಿ ಪ್ರಚಾರ ಸಮಿತಿ ಜಿಲ್ಲಾ ಉಸ್ತುವಾರಿ ಕೆ.ಪಿ.ಜಾನಿ ಪ್ರಥಮ ಭೇಟಿ: ಸಮಾಲೋಚನಾ ಸಭೆ

johny k p
08/09/2025

ಚಿಕ್ಕಬಳ್ಳಾಪುರ: ಕೆ.ಪಿ.ಸಿ.ಸಿ ಪ್ರಚಾರ ಸಮಿತಿಯ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಕೆ.ಪಿ.ಜಾನಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸ ನಡೆಸಿ, ಜಿಲ್ಲಾ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿ ಸರ್ಕಾರದ ಜನಪರ ಯೋಜನೆಗಳ ಪ್ರಚಾರ ಕಾರ್ಯಕ್ಕೆ ಚುರುಕು ಮುಟ್ಟಿಸಿದರು.

ಮಾಜಿ ಸಚಿವ, ಹಾಲಿ ಕರ್ನಾಟಕ ಪ್ರದೇಶ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾದ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಎ.ಐ.ಸಿ.ಸಿ.ಯ ಹಾಗೂ ಕೆ.ಪಿ.ಸಿ.ಸಿಯ ನಿರ್ದೇಶನದಂತೆ ಈ ಕಾರ್ಯವನ್ನು ನಡೆಸಲಾಯಿತು.

ರಾಜ್ಯ ಪ್ರಚಾರ ಸಮಿತಿಯಿಂದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ಇತ್ತೀಚೆಗೆ ನೇಮಕ ಮಾಡಲಾಗಿತ್ತು. ಇತ್ತೀಚೆಗಷ್ಟೆ ಎ.ಐ.ಸಿ.ಸಿ ಯಿಂದ ಕರ್ನಾಟಕ ಪ್ರದೇಶ್ ಕಾಂಗ್ರೆಸ್ಸಿನ ರಾಜ್ಯ ಪ್ರಚಾರ ಸಮಿತಿಯ ಮುಖ್ಯ ಸಂಯೋಜಕರು ಮತ್ತು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗೆ ಉಸ್ತುವಾರಿಯಾಗಿ ನೇಮಕಗೊಂಡ ಕೆ.ಪಿ.ಜಾನಿ ಅವರು ಚಿಕ್ಕಬಳ್ಳಾಪುರ ಜಿಲ್ಲಾ ಕಾಂಗ್ರೆಸ್ ನಾಯಕರನ್ನು ಪ್ರಥಮ ಬಾರಿಗೆ ಭೇಟಿಯಾದರು. ಇದೇ ವೇಳೆ ಚಿಕ್ಕಬಳ್ಳಾಪುರ ಜಿಲ್ಲೆಯ ನೂತನ ಪ್ರಚಾರ ಸಮಿತಿಯನ್ನು ರಚಿಸುವ ಬಗ್ಗೆ  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೇಶವ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಮಾಲೋಚನಾ ಸಭೆ ನಡೆಸಲಾಯಿತು.

johny k p

ಈ ಸಭೆಯಲ್ಲಿ ನಿಯೋಜಿತ ಪ್ರಚಾರ ಸಮಿತಿ ಅಧ್ಯಕ್ಷರಾದ  ನಾರಾಯಣ ಸ್ವಾಮಿ ಹಾಗೂ ಬ್ಲಾಕ್ ಅಧ್ಯಕ್ಷರುಗಳು ಜಿಲ್ಲೆಯ ಎಲ್ಲಾ ಮುಂಚೂಣಿ ಘಟಕದ ನಾಯಕರು ಉಪಸ್ಥಿತರಿದ್ದು, ಸಮಾಲೋಚನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಜಾನಿ ಕೆ.ಪಿ.ಯವರ ಜೊತೆಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಉಪಾಧ್ಯಕ್ಷರಾದ ಎ.ಕೆ.ಇಬ್ರಾಹಿಂ ಹಾಗೂ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಆಡಳಿತ ಸಮಿತಿಯ ನಿರ್ದೇಶಕರಾದ ವಸಂತ ಪೆಲ್ತಡ್ಕ ಉಪಸ್ಥಿತರಿದ್ದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version