ಯುವಕನ ಗಂಟಲಿನೊಳಗೆ ನುಗ್ಗಿದ ಮೀನು: ಯುವಕನ ದಾರುಣ ಸಾವು - Mahanayaka

ಯುವಕನ ಗಂಟಲಿನೊಳಗೆ ನುಗ್ಗಿದ ಮೀನು: ಯುವಕನ ದಾರುಣ ಸಾವು

fish
03/03/2025


Provided by

ಕೇರಳ: ಮೀನು ಹಿಡಿಯುತ್ತಿದ್ದ ವೇಳೆ ಯುವಕನ ಗಂಟಲಿನೊಳಗೆ ಹಾರಿದ ಮೀನು ಗಂಟಲಲ್ಲಿ ಸಿಲುಕಿಕೊಂಡು ಯುವಕ ಸಾವನ್ನಪ್ಪಿದ ಘಟನೆ ಕೇರಳದ ಆಲಪ್ಪುಳ ಸಮೀಪದ ಕಾಯಂಕುಲಂನಲ್ಲಿ ಭಾನುವಾರ ನಡೆದಿದೆ.


Provided by

ಪುತ್ತುಪ್ಪಲ್ಲಿಯ ಆದರ್ಶ್ ಅಲಿಯಾಸ್ ಉನ್ನಿ (25) ಮೃತಪಟ್ಟ ಯುವಕನಾಗಿದ್ದಾನೆ. ಸಂಜೆ 4:30ರ ವೇಳೆಗೆ ಈ ಘಟನೆ ನಡೆದಿದೆ. ಸ್ನೇಹಿತರೊಂದಿಗೆ ಮೀನು ಹಿಡಿಯಲೆಂದು ಯುವಕ ಗದ್ದೆಗೆ ತೆರಳಿದ್ದ. ಗದ್ದೆಗೆ ನೀರು ಹಾಯಿಸಿ ಮೀನು ಹಿಡಿಯುತ್ತಿದ್ದ ವೇಳೆ ಮೀನೊಂದು  ಆತನ ಬಾಯಿಗೆ ಕಚ್ಚಿ ಗಂಟಲೊಳಗೆ ನುಗ್ಗಿ, ಗಂಟಲಲ್ಲಿ ಸಿಲುಕಿತ್ತು.

ತಕ್ಷಣವೇ ಯುವಕನನ್ನು ಆಸ್ಪತ್ರೆಗೆ ಕರೆದೊಯ್ಯಲಾಯ್ತು, ಆದರೆ ಆತನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಏಕಾಏಕಿ ನಡೆದ ಘಟನೆಯ ಬಳಿಕ ಯುವಕ ದಾರುಣವಾಗಿ ಸಾವನ್ನಪ್ಪಿದ್ದಾನೆ.


Provided by

ಈ ಸಂಬಂಧ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (ಬಿಎನ್‌ಎಸ್‌ಎಸ್) ಸೆಕ್ಷನ್ 194 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/HEkqDgrW2BlJLad5kZ1DX7

ಇತ್ತೀಚಿನ ಸುದ್ದಿ