ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಹೋಗಿ ಒಂದೇ ಕುಟುಂಬದ ಐವರು ಸಾವು
ಕಚ್: ನೀರಿನಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಲು ಯತ್ನಿಸಿದ ಒಂದೇ ಕುಟುಂಬದ ಐವರು ಕಚ್ನ ನರ್ಮದಾ ಕಾಲುವೆಯಲ್ಲಿ ಮುಳುಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಪ್ರಾಗ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗುಂಡ್ಲಾ ಗ್ರಾಮದ ಬಳಿ ಸೋಮವಾರ ಸಂಜೆ 7 ಗಂಟೆಗೆ ಈ ಘಟನೆ ನಡೆದಿದೆ ಎಂದು ಕಚ್ ಪಶ್ಚಿಮ ಎಸ್ಪಿ ಸೌರಭ್ ಸಿಂಗ್ ತಿಳಿಸಿದ್ದಾರೆ. ನೀರು ತರಲು ಮಹಿಳೆ ಹೋಗಿದ್ದ ವೇಳೆ ಕಾಲು ಜಾರಿ ಬಿದ್ದಿದ್ದಾಳೆ, ಆಕೆಯನ್ನು ರಕ್ಷಿಸಲು ಹೋದ ಐವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ನೀರಿನಲ್ಲಿ ಮುಳುಗುತ್ತಿರುವುದನ್ನು ನೋಡಿದ ಇತರ ನಾಲ್ವರು ಆಕೆಯನ್ನು ರಕ್ಷಿಸಲು ನೀರಿಗೆ ಜಿಗಿದಿದ್ದಾರೆ, ದುರದೃಷ್ಟವಶಾತ್ ಯಾರಿಗೂ ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ವಿಚಾರ ತಿಳಿಯುತ್ತಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು ಮತ್ತು ರಕ್ಷಣಾ ತಂಡ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದರು. ಆದರೆ ಕತ್ತಲೆಯಾಗಿದ್ದ ಕಾರಣ ಕಾರ್ಯಾಚರಣೆಗೆ ಸಾಕಷ್ಟು ತೊಂದರೆಯಾಗಿತ್ತು. ಆದರೆ, ಹಲವು ಗಂಟೆಗಳ ಪ್ರಯತ್ನದ ಬಳಿಕ ಎಲ್ಲರ ಮೃತದೇಹಗಳನ್ನು ಪೊಲೀಸರು ಹೊರತೆಗೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GoQnwP3qNkmAbAPcjb8n8F
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka