ಕಾಡಾನೆ ಸೆರೆ ಕಾರ್ಯಾಚರಣೆಯ ಮಾರ್ಗಸೂಚಿಯಲ್ಲಿ ನ್ಯೂನತೆಗಳು ಕಂಡು ಬಂದಿವೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ - Mahanayaka
1:10 AM Thursday 13 - November 2025

ಕಾಡಾನೆ ಸೆರೆ ಕಾರ್ಯಾಚರಣೆಯ ಮಾರ್ಗಸೂಚಿಯಲ್ಲಿ ನ್ಯೂನತೆಗಳು ಕಂಡು ಬಂದಿವೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

eeshwar kandre
07/12/2023

ಬೆಳಗಾವಿ: ಕಾಡಾನೆ ಸೆರೆ ಕಾರ್ಯಾಚರಣೆ ಸಂದರ್ಭದಲ್ಲಿ ಅರಣ್ಯಾಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಅರ್ಜುನನ ಸಾವಿನ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ನಡುವೆ ಈ ಬಗ್ಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸ್ಪಷ್ಟನೆ ನೀಡಿದ್ದಾರೆ.

ಕಾಡಾನೆ ಸೆರೆ ಕಾರ್ಯಾಚರಣೆಯ ಮಾರ್ಗಸೂಚಿಯಲ್ಲಿ ನ್ಯೂನತೆಗಳು ಕಂಡು ಬಂದಿವೆ. ಹಾಗಾಗಿ ಅವುಗಳನ್ನು ಬದಲಿಸಿ ಮುಂದೆ ದುರ್ಘಟನೆ ನಡೆಯದಂತೆ ಕ್ರಮವಹಿಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಈ ಬಗ್ಗೆ ಮಾತನಾಡಿದ ಅವರು, ಈಗಿರುವ ಮಾರ್ಗ ಸೂಚಿಯಲ್ಲಿ ಸಾಕಷ್ಟು ನ್ಯೂನತೆಗಳಿವೆ. ಪುಂಡಾನೆಗಳನ್ನು ಹಿಮ್ಮೆಟ್ಟಿಸುವ ಕಾರ್ಯ ಕರ್ನಾಟಕ ಬಿಟ್ಟರೆ ಬೇರೆಲ್ಲೂ ನಡೆಯುವುದಿಲ್ಲ, ಹಾಗಾಗಿ ತಜ್ಞರ ಸಲಹೆ ಪಡೆದು ಮುಂದುವರಿಯುತ್ತೇವೆ ಎಂದು ತಿಳಿಸಿದರು.

ಅರ್ಜುನನ ಸಾವಿನ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಯಬೇಕು ಎನ್ನುವ ಒತ್ತಾಯಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಮಗ್ರ ವರದಿ ತರಿಸಿಕೊಂಡು ತನಿಖೆ ಮಾಡುತ್ತೇವೆ. ಲೋಪ ಕಂಡು ಬಂದರೆ ಕ್ರಮ ಜರಗಿಸುತ್ತೇವೆ ಎಂದು ತಿಳಿಸಿದರು. ಇನ್ನೂ ಹಾಸನದಲ್ಲಿ ಅರಣ್ಯಾಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಇದೇ ವೇಳೆ ಉತ್ತರಿಸಿದ ಅವರು, ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ನಿಶ್ಚಿತ ಎಂದರು.

ಇತ್ತೀಚಿನ ಸುದ್ದಿ