ರೈತರಿಗೆ ‘ವಸುಧಾಮೃತ’ ಭಾಗ್ಯ, ಯುವಕರಿಗೆ 56 ಸಾವಿರ ಉದ್ಯೋಗ: ಸಿದ್ಧರಾಮಯ್ಯ ಬಜೆಟ್‌ ಹೈಲೈಟ್ಸ್

siddaramaiah
06/03/2026

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಇಂದು ದಾಖಲೆಯ 17ನೇ ಬಾರಿಗೆ ರಾಜ್ಯ ಬಜೆಟ್ ಮಂಡಿಸಿದರು. ರಾಜ್ಯದ ಆರ್ಥಿಕತೆಯನ್ನು ಸದೃಢಗೊಳಿಸಲು ’11G ಆರ್ಥಿಕ ಮಾದರಿ’ಯನ್ನು ಅವರು ಘೋಷಿಸಿದ್ದಾರೆ.

‘ವಸುಧಾಮೃತ’ ಯೋಜನೆ: ಸುಸ್ಥಿರ ಕೃಷಿ ಪದ್ಧತಿಗಳನ್ನು ಉತ್ತೇಜಿಸಲು ಮತ್ತು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಈ ಹೊಸ ಯೋಜನೆಯನ್ನು ಘೋಷಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಇದನ್ನು ಜಾರಿಗೆ ತರಲಾಗುವುದು.

ರೈತರಿಗೆ ಎಐ (AI) ತಂತ್ರಜ್ಞಾನ: ರೈತ ಸಂಪರ್ಕ ಕೇಂದ್ರಗಳನ್ನು ಕೃತಕ ಬುದ್ಧಿಮತ್ತೆ (AI) ತಂತ್ರಜ್ಞಾನದ ಮೂಲಕ ಮೇಲ್ದರ್ಜೆಗೇರಿಸಲಾಗುವುದು.

ರೈತ ಮಾಲ್‌ ಗಳು: ಕೋಲಾರ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪ್ರಾಯೋಗಿಕವಾಗಿ ‘ರೈತ ಮಾಲ್‌’ಗಳನ್ನು ಸ್ಥಾಪಿಸಲಾಗುವುದು.

ಉದ್ಯೋಗಾವಕಾಶ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಅಲ್ಲದೆ, ನೇಮಕಾತಿಯಲ್ಲಿ ವಯೋಮಿತಿಯನ್ನು 5 ವರ್ಷಗಳ ಕಾಲ ಸಡಿಲಿಕೆ ಮಾಡಲಾಗಿದೆ.

ಆರ್ಥಿಕ ಪ್ರಗತಿ: ಕರ್ನಾಟಕದ ಜಿಎಸ್‌ಡಿಪಿ (GSDP) ಶೇ. 8.1 ರಷ್ಟು ಬೆಳವಣಿಗೆ ಕಂಡಿದ್ದು, ಇದು ರಾಷ್ಟ್ರೀಯ ಸರಾಸರಿಗಿಂತ (ಶೇ. 7.4) ಹೆಚ್ಚಾಗಿದೆ.

ಜಿಎಸ್‌ ಟಿ ನಷ್ಟದ ಆತಂಕ: ಜಿಎಸ್‌ ಟಿ ದರಗಳ ತರ್ಕಬದ್ಧಗೊಳಿಸುವಿಕೆಯಿಂದಾಗಿ ರಾಜ್ಯಕ್ಕೆ ವಾರ್ಷಿಕ ಸುಮಾರು 12,000 ರಿಂದ 15,000 ಕೋಟಿ ರೂಪಾಯಿಗಳಷ್ಟು ಆದಾಯದ ಕೊರತೆಯಾಗುವ ಆತಂಕವನ್ನು ಸಿಎಂ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸರ್ಕಾರದ ಮೇಲೆ ವೀಮರ್ಶೆ: ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ ಮತ್ತು ಒಕ್ಕೂಟ ವ್ಯವಸ್ಥೆಯ ತತ್ವಗಳನ್ನು ಗಾಳಿಗೆ ತೂರುತ್ತಿದೆ ಎಂದು ಸಿದ್ಧರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.

11G ಆರ್ಥಿಕ ಮಾದರಿ: ಗ್ಯಾರಂಟಿ ಆರ್ಥಿಕತೆ, ಶಿಕ್ಷಣ, ಆರೋಗ್ಯ, ಕೃಷಿ, ಸುಶಾಸನ, ಹಸಿರು ಆರ್ಥಿಕತೆ ಸೇರಿದಂತೆ 11 ಪ್ರಮುಖ ಕ್ಷೇತ್ರಗಳಿಗೆ ಒತ್ತು ನೀಡುವ ಅಭಿವೃದ್ಧಿ ಮಾದರಿಯನ್ನು ಸಿಎಂ ಪ್ರಸ್ತುತಪಡಿಸಿದರು.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version