ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ. ಅಕ್ಕಿಮಾತ್ರ ಬರುತ್ತದೆ: ಬೊಮ್ಮಾಯಿ - Mahanayaka

ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆ.ಜಿ. ಅಕ್ಕಿಮಾತ್ರ ಬರುತ್ತದೆ: ಬೊಮ್ಮಾಯಿ

basavaraj bommai
28/06/2023


Provided by

ಬೆಂಗಳೂರು: ಕಾಂಗ್ರೆಸ್ ನವರು ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಭರವಸೆ ನೀಡಿದ್ದರು. ಈಗ ಅಕ್ಕಿ ಬದಲು 34 ರೂ. ಕೊಡುವುದಾಗಿ ಹೇಳುತ್ತಿದ್ದಾರೆ. ಇವರು ಕೊಡುವ ಹಣಕ್ಕೆ ಮಾರುಕಟ್ಟೆಯಲ್ಲಿ ಎರಡೂವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹತ್ತು ಕೆಜಿ ಅಕ್ಕಿ ಕೊಡುವುದಾಗಿ ಹೇಳಿದ್ದರು. ಈಗ ಐದು ಕೆಜಿ ಕೊಡುವುದಾಗಿ ಹೇಳುತ್ತಿದ್ದಾರೆ. ಅವರು ಮಾತಿಗೆ ತಪ್ಪುತ್ತಿದ್ದಾರೆ. ಎಷ್ಟಾದರೂ ಆಗಲಿ ನಾವು ಅಕ್ಕಿಯನ್ನೇ ಕೊಡುತ್ತೇವೆ ಅಂತ ಹೇಳಿದ್ದರು. ಈಗ ಹಣ ಹಾಕುತ್ತೇವೆ ಅಂತ ಹೇಳುತ್ತಿದ್ದಾರೆ. ಇವರು ಮತ್ತೆ ಮಾತಿಗೆ ತಪ್ಪಿದ್ದಾರೆ ಎಂದು ಆರೊಪಿಸಿದರು.

ಮಾರುಕಟ್ಟೆಯಲ್ಲಿ  ಪ್ರತಿ ಕೆಜಿ ಅಕ್ಕಿಗೆ ಐವತ್ತರಿಂದ ಆರವತ್ತು  ರೂಪಾಯಿ ಬೆಲೆ ಇದೆ. ಇವರು ಮೂವತ್ತು ರೂಪಾಯಿ ಕೊಟ್ಟರೆ ಜನರಿಗೆ ಎರಡುವರೆ ಕೆಜಿ ಅಕ್ಕಿ ಮಾತ್ರ ಬರುತ್ತದೆ. ಕರೆಂಟ್ ವಿಚಾರದಲ್ಲಿಯೂ ಕಂಡಿಷನ್ ಹಾಕಿ  ಅದನ್ನೆ ಮಾಡಿದ್ದಾರೆ‌. ಹತ್ತು ಕೆಜಿ ಅಕ್ಕಿಯನ್ನು ನರೇಂದ್ದ ಮೋದಿ ಸರ್ಕಾರ ಡಿಸೆಂಬರ್ ವರೆಗೂ  ಕೊಟ್ಟಿದೆ‌ ಹತ್ತು ಕೆಜಿ ಕೊಟ್ಟವರು ಇವರೇ ಮೊದಲಲ್ಲಾ‌ ಎಷ್ಟೇ ಖರ್ಚಾದರೂ ಅಕ್ಕಿ ಕೊಡುವುದಾಗಿ ಹೇಳಿದವರು ಈಗ ಮಾತಿಗೆ ತಪ್ಪಿ ಜನರಿಗೆ ಎರಡೂವರೆ ಕೆಜಿ ಮಾತ್ರ ದೊರೆಯುವಂತೆ ಮಾಡಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

 

ಇತ್ತೀಚಿನ ಸುದ್ದಿ