ನಿರಂತರ ಮಳೆ: ಆಗಸ್ಟ್ 6ರವರೆಗೆ ಮುಂದುವರಿಯುವ ಮುನ್ಸೂಚನೆ - Mahanayaka
9:00 AM Thursday 18 - September 2025

ನಿರಂತರ ಮಳೆ: ಆಗಸ್ಟ್ 6ರವರೆಗೆ ಮುಂದುವರಿಯುವ ಮುನ್ಸೂಚನೆ

haevy rain
02/08/2024

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು ಅವಧಿಯ ಅಥವಾ ನಿರಂತರವಾಗಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.


Provided by

ಈಗಿನಂತೆ ಈ ಸಾಮಾನ್ಯ ಮಳೆಯು ಆಗಸ್ಟ್ 6ರವರೆಗೆ ಮುಂದುವರಿಯುವ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಸಹ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಸ್ವಲ್ಪ ಜಾಸ್ತಿ ಇರಬಹುದು. ಮಲೆನಾಡು ಭಾಗಗಳಲ್ಲಿಯೂ ಆಗಸ್ಟ್ 6ರ ತನಕ ಸಾಮಾನ್ಯ ಮಳೆ ಮುಂದುವರಿಯುವ ಲಕ್ಷಣಗಳಿವೆ.

ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ತುಂತುರು ಹಾಗೂ ಕೆಲವು ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.

ಈಗಿನಂತೆ ಆಗಸ್ಟ್ 7ರಿಂದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುತ್ತಿದ್ದಂತಯೇ ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ ಇದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ