1:22 AM Wednesday 22 - October 2025

ಕಾಲು ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

chikkamagaluru
03/09/2023

ಚಿಕ್ಕಮಗಳೂರು:  ಕಾಫಿನಾಡ ಮಲೆನಾಡು ಭಾಗದಲ್ಲಿ ಕಾಡಾನೆ ದಾಳಿಯಿಂದ ಜನ ಕಂಗೆಟ್ಟಿದ್ದಾರೆ. ಇದೀಗ ವ್ಯಕ್ತಿಯೋರ್ವರು ಕಾಡಾನೆ ದಾಳಿಗೆ ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ದುರ್ಗಾ ಕಿನ್ನಿ (60) ಕಾಡಾನೆ ಕಾಲ್ತುಳಿತಕ್ಕೆ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ.

ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆದಿದೆ. ಆನೆಯನ್ನು ಕಾಡಿಗಟ್ಟಲು ಅರಣ್ಯಾಧಿಕಾರಿಗಳು ಸ್ಥಳದಲ್ಲಿ ಪಟಾಕಿ ಸಿಡಿಸುತ್ತಿದ್ದಾರೆ.  ಘಟನಾ ಸ್ಥಳಕ್ಕೆ  ಸ್ಥಳಿಯರು ಭೇಟಿ ನೀಡ್ತಿರೋದ್ರಿಂದ ಮುನ್ನೆಚ್ಚರಿಕೆ ಕ್ರಮ ವಹಿಸಲಾಗಿದೆ.

ಆಲ್ದೂರು ವಲಯ ಅರಣ್ಯ ಇಲಾಖೆ ವ್ಯಾಪ್ತಿಯಲ್ಲಿ ಈ  ಘಟನೆ ನಡೆದಿದೆ. ಸ್ಥಳಕ್ಕೆ ಹಿರಿಯ ಅರಣ್ಯ ಹಿರಿಯ ಅಧಿಕಾರಿಗಳು ಭೇಟಿ, ಪರಿಶೀಲನೆ ನಡೆಸಿದ್ದಾರೆ.  ಮೂಡಿಗೆರೆಯಲ್ಲಿ 2 ವರ್ಷದಲ್ಲಿ 6ಕ್ಕೂ ಹೆಚ್ಚು ಜನ ಆನೆ ದಾಳಿಗೆ ಬಲಿಯಾಗಿದ್ದಾರೆ.

ಇತ್ತೀಚಿನ ಸುದ್ದಿ

Exit mobile version