ಚಾರ್ಮಾಡಿ ಘಾಟ್: ನಿಯಂತ್ರಣಕ್ಕೆ ಬಂದ ಕಾಡ್ಗಿಚ್ಚು

25/01/2025
ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯ ಅಣ್ಣಪ್ಪ ಸ್ವಾಮಿ ದೇಗುಲದ ಸಮೀಪ ಸೇರಿದಂತೆ ವಿವಿಧೆಡೆ ಶುಕ್ರವಾರ ರಾತ್ರಿ ಆವರಿಸಿದ ಕಾಡ್ಗಿಚ್ಚು ಶನಿವಾರವೂ ಸಹ ಉರಿಯುತ್ತಿದ್ದು, ಅಗ್ನಿಶಾಮಕ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬಿಸಿಲಿನಲ್ಲಿಯೇ ಹರಸಾಹಸ ಮಾಡಿ ಬೆಂಕಿ ನಂದಿಸಲು ಪ್ರಯತ್ನ ನಡೆಸಿದರು.
ಸತತ ಪ್ರಯತ್ನದಿಂದ ಬೆಂಕಿ ಹತೋಟಿಗೆ ಬಂದಿದ್ದು ಇನ್ನು ಕಾರ್ಯಾಚರಣೆ ಮುಂದುವರಿದಿದೆ. ಸಿಬ್ಬಂದಿಗಳು ಕಡಿದಾದ ಬೆಟ್ಟವನ್ನೇರಿ ಹರಸಾಹಸ ಪಟ್ಟು ಬೆಂಕಿಯನ್ನು ಹತೋಟಿಗೆ ತಂದರು.
ಚಾರ್ಮಾಡಿ ಅರಣ್ಯದಲ್ಲಿ ಎರಡನೇ ಸಲ ಭಾರೀ ಪ್ರಮಾಣದಲ್ಲಿ ಕಾಡ್ಗಿಚ್ಚು ಆವರಿಸಿದ್ದು, ನೂರಾರು ಎಕರೆ ಅರಣ್ಯ ಬೆಂಕಿಗಾಹುತಿಯಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: