ಕಾಡು ಕುರಿ ಬೇಟೆಯಾಡಿದ್ದ ವ್ಯಕ್ತಿಯನ್ನು ಬಂಧಿಸಿದ ಅರಣ್ಯ ಅಧಿಕಾರಿಗಳು
20/10/2023
ಚಾಮರಾಜನಗರ: ಕಾಡು ಕುರಿ ಬೇಟೆಯಾಡಿದ್ದ ವ್ಯಕ್ತಿಯನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ ಘಟನೆ ಸತ್ತೇಗಾಲದ ಜಗೇರಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.
ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಶಿಲುವೈಪುರ ಧೋಮಿದೀನ್ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ ಕಾಡು ಕುರಿ ಮಾಂಸ, ಒಂದು ನಾಡ ಬಂದೂಕು ಹಾಗೂ ಆಯುಧಗಳು ವಶಪಡಿಸಿಕೊಳ್ಳಲಾಗಿದೆ.
ಸತ್ತೇಗಾಲದ ಜಗೇರಿ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಿ ಮಾಂಸ ಮಾರಾಟ ಮಾಡುವ ವೇಳೆ ಆರೋಪಿಯನ್ನು ಸೆರೆ ಹಿಡಿಯಲಾಗಿದೆ.ಕೊಳ್ಳೇಗಾಲ ಹಾಗೂ ಹನೂರು ಭಾಗದಲ್ಲಿ ಆಗಾಗ್ಗೆ ನಡೆಯುತ್ತಿರುವ ಕಾಡು ಪ್ರಾಣಿಗಳ ಬೇಟೆ ನಡೆಯುತ್ತಿದೆ. ಬೇಟೆಗಾರರನ್ನು ಮಟ್ಟ ಹಾಕಲು ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

























