ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ! - Mahanayaka

ಚಾರ್ಮಾಡಿ ಘಾಟಿಯ ರಸ್ತೆಯಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ!

charmadi ghat
14/06/2024

ಕೊಟ್ಟಿಗೆಹಾರ: ಚಾರ್ಮಾಡಿ ಘಾಟಿಯಲ್ಲಿ ಮೊನ್ನೆ ರಾತ್ರಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದಿದ್ದ ಕಾಡಾನೆ ಅರ್ಧ ಗಂಟೆ ನಿಂತಲ್ಲೇ ನಿಂತ ಪರಿಣಾಮ ಎರಡು ಕಿ.ಮೀ.ನಷ್ಟು ದೂರ ಟ್ರಾಫಿಕ್ ಕೂಡ ಜಾಮ್ ಆಗಿತ್ತು ಇದೀಗ ಮತ್ತೆ ಕಾಡಾನೆ ರಸ್ತೆ ಬದಿಯಲ್ಲಿ‌ ಕಾಣಿಸಿಕೊಂಡಿದೆ.

ಇಂದು ಚಾರ್ಮಾಡಿ ಘಾಟಿಯಲ್ಲಿ ಬೆಳ್ಳಂ ಬೆಳಗ್ಗೆ ಮತ್ತೆ ಒಂಟಿ ಸಲಗದ ದರ್ಶನವಾಗಿದೆ. ಚಾರ್ಮಾಡಿ ಘಾಟ್ ಅತ್ಯಂತ ಕಿರಿದಾದ ಹಾವು-ಬಳುಕಿನ ಮೈಕಟ್ಟಿನ ರಸ್ತೆಯಾಗಿದೆ. ರಸ್ತೆಯ ಒಂದು ಬದಿ ಬೆಟ್ಟ, ಮತ್ತೊಂದು ಬದಿ ಸಾವಿರಾರು ಅಡಿ ಕಂದಕ ಇದೆ. ಈ ಮಾರ್ಗದಲ್ಲಿ ಆನೆ ಎದುರಾದರೆ ತಪ್ಪಿಸಿಕೊಳ್ಳೋದು ಕಷ್ಟ ಎಂದು ವಾಹನ ಸವಾರರು ಆತಂಕ ವ್ಯಕ್ತಪಡಿಸಿದ್ದಾರೆ.

ತಿರುವಿನಲ್ಲಿ ಬೈಕ್ ಸವಾರರು ಆನೆ ಕೈಗೆ ಸಿಕ್ಕರೆ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ ಎಂದು ಇಲ್ಲಿನ ಸ್ಥಳೀಯ ನಿವಾಸಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

ಚಾರ್ಮಾಡಿ ಘಾಟಿ ತಪ್ಪಲಿನ ಗ್ರಾಮಗಳಿಗೂ ಒಂಟಿ ಸಲಗ ಬಂದಿತ್ತು. ಆನೆಯನ್ನ ಸೆರೆ ಹಿಡಿದು ಸ್ಥಳಾಂತರಿಸುವಂತೆ ಸ್ಥಳೀಯರು ಒತ್ತಾಯಿಸುತ್ತಿದ್ದಾರೆ.

ಕಳೆದ ಎರಡು ತಿಂಗಳಿಂದ ನಿರಂತರವಾಗಿರುವ ಕಾಡಾನೆ ಕಾಟದಿಂದ ಜನರು ಆತಂಕದಲ್ಲಿದ್ದಾರೆ.  ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನಲ್ಲಿ ಈ ಘಟನೆ ನಡೆದಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ