ಇನ್ನಿಲ್ಲ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ನಿಧನ

14/05/2024

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ಮುಖಂಡ ಸುಶೀಲ್ ಕುಮಾರ್ ಮೋದಿ ನಿಧನರಾಗಿದ್ದಾರೆ. ಇವರಿಗೆ 72 ವಯಸ್ಸಾಗಿತ್ತು. ಈ ವರ್ಷದ ಏಪ್ರಿಲ್ ನಲ್ಲಿ, ಮಾಜಿ ಉಪಮುಖ್ಯಮಂತ್ರಿ ಅವರು ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಭಾಗವಹಿಸುವುದಿಲ್ಲ ಎಂದು ಅಂದು ಮಾಹಿತಿ ನೀಡಿದ್ದರು.

ಬಿಹಾರದ ರಾಜಕೀಯ ಇತಿಹಾಸದಲ್ಲಿ ಸುಶೀಲ್ ಕುಮಾರ್ ಮೋದಿ ಬಿಜೆಪಿ ನಾಯಕರಾಗಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದ ಉಪಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಅವರು ಬಿಹಾರದ ಹಣಕಾಸು ಸಚಿವರಾಗಿಯೂ ಸೇವೆ ಸಲ್ಲಿಸಿದರು ಮತ್ತು ರಾಜ್ಯಸಭಾ ಸದಸ್ಯರಾಗಿದ್ದರು.

ಪಕ್ಷದ ಹಿರಿಯ ನಾಯಕನ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಪಕ್ಷದಲ್ಲಿ ನನ್ನ ಮೌಲ್ಯಯುತ ಸಹೋದ್ಯೋಗಿ ಮತ್ತು ದಶಕಗಳಿಂದ ನನ್ನ ಸ್ನೇಹಿತ ಸುಶೀಲ್ ಮೋದಿ ಜಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಬಿಹಾರದಲ್ಲಿ ಬಿಜೆಪಿಯ ಏಳಿಗೆ ಮತ್ತು ಅದರ ಯಶಸ್ಸಿಗೆ ಅವರು ಅಮೂಲ್ಯ ಕೊಡುಗೆ ನೀಡಿದ್ದಾರೆ. ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ ಅವರು ವಿದ್ಯಾರ್ಥಿ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು” ಎಂದು ಪ್ರಧಾನಿ ಮೋದಿ ತಮ್ಮ ಅಧಿಕೃತ ಮೈಕ್ರೋಬ್ಲಾಗಿಂಗ್ ಸೈಟ್ನಲ್ಲಿ ಹಿಂದಿಯಲ್ಲಿ ಬರೆದಿದ್ದಾರೆ.

 

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ

Exit mobile version