ವೇಣೂರು ಪೆರ್ಮುಡ ಕಂಬಳಕ್ಕೆ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ - Mahanayaka
3:38 AM Sunday 14 - September 2025

ವೇಣೂರು ಪೆರ್ಮುಡ ಕಂಬಳಕ್ಕೆ ಆಗಮಿಸಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

kambala siddaramaiha
30/11/2022

ಬೆಳ್ತಂಗಡಿ : ‘ಜಿಲ್ಲೆಯ ಇತಿಹಾಸ ಪ್ರಸಿದ್ಧ ವೇಣೂರು ಪೆರ್ಮುಡ ಹೊನಲು ಬೆಳಕಿನ 30ನೇ ವರ್ಷದ ಸೂರ್ಯ — ಚಂದ್ರ ಜೋಡುಕರೆ ಬಯಲು ಕಂಬಳ ಡಿ.3 ರಂದು ಉದ್ಘಾಟನೆಯಾಗಲಿದ್ದು , ಡಿ.4 ರಂದು ಮಾಜಿ ಮುಖ್ಯಮಂತ್ರಿ ವಿಧಾನ ಸಭಾ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಂಬಳ ಕೂಟದಲ್ಲಿ ಅತಿಥಿಯಾಗಿ ಭಾಗವಹಿಸಲಿದ್ದಾರೆ’ ಎಂದು ಕಂಬಳ ಸಮಿತಿಯ ಕಾರ್ಯಧ್ಯಕ್ಷ ಶೇಖರ ಕುಕ್ಕೆಡಿ ಹೇಳಿದರು.


Provided by

ಅವರು ಬುಧವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಈ ವರ್ಷ ವಿಶೇಷವಾಗಿ 30ನೇ ವರ್ಷದ ಕಂಬಳವಾಗಿದ್ದು, ಕಂಬಳದ ಎಲ್ಲಾ ಪೂರ್ವ ತಯಾರಿ ಸಂಪೂರ್ಣ ಮುಗಿದಿರುತ್ತದೆ. ನಿಗದಿಯಂತೆ 24 ಗಂಟೆಯೊಳಗೆ ಮುಗಿಸಲು ಎಲ್ಲಾ ಸಿದ್ಧತೆಗಳನ್ನು, ಅದಕ್ಕೆ ಬೇಕಾದ ವಿವಿಧ ಸಮಿತಿಗಳನ್ನು ಈಗಾಗಲೇ ಮಾಡಿಕೊಳ್ಳಲಾಗಿದೆ’ ಎಂದರು.

ಕಂಬಳ ಸಮಿತಿ ಅಧ್ಯಕ್ಷ ನಿತೀಶ್ ಕೋಟ್ಯಾನ್ ಮಾತನಾಡಿ, ಕಂಬಳವನ್ನು ಡಿ.3ರಂದು ಬೆಳಿಗ್ಗೆ 8:30ಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸ ಡಾ.ಪದ್ಮ ಪ್ರಸಾದ್ ಅಜಿಲರು ಉದ್ಘಾಟಿಸಲಿದ್ದಾರೆ. ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಯನ್. ಪುರುಷೋತ್ತಮ ರಾವ್ ಅಧ್ಯಕ್ಷತೆ ವಹಿಸಲಿದ್ದು, ತಹಶೀಲ್ದಾರ್ ಪೃಥ್ವಿ ಸಾನಿಕಂ, ವೃತ್ತ ನಿರೀಕ್ಷಕ ಶಿವಕುಮಾರ್ ಬಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಲಿದ್ದಾರೆ.

ಸಂಜೆ ನಡೆಯುವ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಂಬಳ ಸಮಿತಿಯ ಗೌರವ ಅಧ್ಯಕ್ಷ, ಮಾಜಿ ಶಾಸಕ ವಸಂತ ಬಂಗೇರ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ ಸುನೀಲ್ ಕುಮಾರ್ , ಸಂಸದ ನಳಿನ್ ಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ಉಪ ನಾಯಕ ಬಿ.ಕೆ.ಹರಿಪ್ರಸಾದ್, ಸಹಕಾರ ರತ್ನ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಶಾಸಕ ಹರೀಶ್ ಪೂಂಜಾ ಸೇರಿದಂತೆ ವಿವಿಧ ಜನಪ್ರತಿನಿಧಿಗಳು, ಗಣ್ಯರು, ಪ್ರಮುಖರು ಭಾಗವಹಿಸಲಿದ್ದಾರೆ ಎಂದರು.

‘ಕಂಬಳದಲ್ಲಿ ಕನೆ ಹಲಗೆ, ಹಗ್ಗ ಕಿರಿಯ, ಹಗ್ಗ ಹಿರಿಯ, ನೇಗಿಲು ಹಿರಿಯ, ನೇಗಿಲು ಕಿರಿಯ, ಅಡ್ಡ ಹಲಗೆ ಹೀಗೆ ಒಟ್ಟು 6 ವಿಭಾಗದಲ್ಲಿ ಕೋಣಗಳ ಓಟದ ಸ್ಪರ್ಧೆಯು ನಡೆಯಲಿದೆ. ಈ ಹಿಂದೆ ಇದ್ದಂತೆ ಜಾಗದ ತಕರಾರು ಇಲ್ಲವಾಗಿದ್ದು, ಒಟ್ಟು 200 ಕ್ಕಿಂತ ಅಧಿಕ ಜೋಡಿ ಎತ್ತುಗಳು ಭಾಗವಹಿಸುವ ನಿರೀಕ್ಷೆ ಇದೆ’ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿಯ ಉಪಾಧ್ಯಕ್ಷ ಸ್ಟಿವನ್ ಮೋನಿಸ್, ಸಲಹೆಗಾರ ಪದ್ಮನಾಭ ಸಾಲಿಯಾನ್ ಮಾಲಾಡಿ, ಸದಸ್ಯರಾದ ದಯಾನಂದ ದೇವಾಡಿಗ, ಜಯಂತ ಕೋಟ್ಯಾನ್  ಇದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ