ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ - Mahanayaka

ಬಿಜೆಪಿಗೆ ಸೇರ್ಪಡೆಗೊಂಡ ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ

bjp
07/02/2024


Provided by

ಭೋಪಾಲ್: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಂತೆಯೇ ಮಧ್ಯಪ್ರದೇಶ ಕಾಂಗ್ರೆಸ್ ಗೆ ಶಾಕ್‌ ಎದುರಾಗಿದ್ದು,  ಮಾಜಿ ಸಿಎಂ ದಿಗ್ವಿಜಯ್ ಸಿಂಗ್ ಆಪ್ತ ಸುಮೇರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಮಾಜಿ ಮುಖ್ಯಮಂತ್ರಿ ದಿಗ್ವಿಜಯ ಸಿಂಗ್ ಅವರ ನಿಕಟವರ್ತಿ ಎಂದು ಹೇಳಲಾಗುತ್ತಿರುವ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಸುಮೇರ್ ಸಿಂಗ್ ಅವರು ಬುಧವಾರ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಉಪಸ್ಥಿತಿಯಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

ಸುಮೇರ್ ಸಿಂಗ್ ಜೊತೆಗೆ, ಅವರ ಪುತ್ರ ಧನಂಜಯ್ ಸಿಂಗ್ ಸೇರಿದಂತೆ ಅವರ ಹಲವಾರು ಬೆಂಬಲಿಗರು ಕೂಡ ಕೇಸರಿ ಪಕ್ಷಕ್ಕೆ ಸೇರಿದ್ದಾರೆ.

ಇತ್ತೀಚಿನ ಸುದ್ದಿ