6:43 AM Saturday 20 - December 2025

ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾದ ಮಾಜಿ ಸಿಎಂ ಕುಮಾರಸ್ವಾಮಿ

h d kumaraswamy
30/08/2023

ಬೆಂಗಳೂರು: ಅನಾರೋಗ್ಯದ ಕಾರಣ ಮಾಜಿ ಸಿಎಂ ಕುಮಾರಸ್ವಾಮಿ ಅವರು ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ಇಂದು ಬೆಳಗ್ಗಿನ ಜಾವ 3.40ಕ್ಕೆ ಕುಮಾರಸ್ವಾಮಿಯವರು ಸುಸ್ತು ಬಳಲಿಕೆಯಿಂದ ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ ಹೆಚ್‍ ಡಿಕೆ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಡಾ. ಸತೀಶ್ಚಂದ್ರ ಹಾಗೂ ವೈದ್ಯರ ತಂಡ ಕುಮಾರಸ್ವಾಮಿಯವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ.

ಕುಮಾರಸ್ವಾಮಿಯವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗಿದೆ. ಅವರ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಅಪೋಲೋ ಆಸ್ಪತ್ರೆಯ ಯೂನಿಟ್ ಹೆಡ್ ಹಾಗೂ ಉಪಾಧ್ಯಕ್ಷ ಡಾ ಗೋವಿಂದಯ್ಯ ಯತೀಶ್ ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿ

Exit mobile version