ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು - Mahanayaka

ಮಾಜಿ ಸಿಎಂ ಎಸ್.ಎಂ.ಕೃಷ್ಣ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

sm krishna
29/04/2024

ಬೆಂಗಳೂರು: ಅನಾರೋಗ್ಯದ ಹಿನ್ನೆಲೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಇಂದು ದಾಖಲಾಗಿದ್ದಾರೆ.

ಎಸ್.ಎಂ.ಕೃಷ್ಣ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿದ್ದು, ಚಿಕಿತ್ಸೆ ಮುಂದುವರಿದಿದೆ.

ಏಪ್ರಿಲ್ 22ರಂದು ಕೂಡ ಎಸ್.ಎಂ.ಕೃಷ್ಣ ಅವರಿಗೆ ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆ ಅವರನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.


Provided by

ಇಂದು ಮತ್ತೆ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು  ಹೇಳಲಾಗಿದೆ.

91 ವರ್ಷ ವಯಸ್ಸಿನ ಎಸ್.ಎಂ.ಕೃಷ್ಣ ಅವರು ಇತ್ತೀಚೆಗೆ ಆಗಾಗ ಅನಾರೋಗ್ಯಕ್ಕೀಡಾಗುತ್ತಿದ್ದಾರೆ. ಅವರು ಸದ್ಯ ಯಾವ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿಲ್ಲ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.


Provided by

ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth

ಇತ್ತೀಚಿನ ಸುದ್ದಿ