ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ: ಬೆಂಗಳೂರಿನ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ನಿಧನ

ತಿರುವನಂತಪುರಂ: ಕೇರಳ ಸಿಎಂ ಆಗಿ ಎರಡು ಬಾರಿ ಸೇವೆ ಸಲ್ಲಿಸಿದ್ದ ಹಿರಿಯ ಕಾಂಗ್ರೆಸ್ ನಾಯಕ ಉಮ್ಮನ್ ಚಾಂಡಿ ಅವರು ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.
ಉಮ್ಮನ್ ಚಾಂಡಿ ಅವರಿಗೆ 79 ವರ್ಷ ವಯಸ್ಸಾಗಿತ್ತು. ಕ್ಯಾನ್ಸರ್ ಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 4:25ಕ್ಕೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಉಮ್ಮನ್ ಚಾಂಡಿ ಗೌರವಾರ್ಥ ಕೇರಳ ಸರ್ಕಾರ ಮಂಗಳವಾರ ಸಾರ್ವಜನಿಕ ರಜೆ ಘೋಷಿಸಿದ್ದು, ಎರಡು ದಿನಗಳ ಕಾಲ ಶೋಕಾಚರಣೆಯಲ್ಲಿ ಘೋಷಿಸಿದೆ.
ಚಾಂಡಿ ಅವರು ಒಟ್ಟು 7 ವರ್ಷಗಳ ಕಾಲ ಎರಡು ಬಾರಿ ಸಿಎಂ ಆಗಿದ್ದರು. ಕೆ.ಕರುಣಾಕರನ್ ಮತ್ತು ಎ.ಕೆ.ಆ್ಯಂಟನಿ ನೇತೃತ್ವದ ವಿವಿಧ ಸರ್ಕಾರಗಳಲ್ಲಿ ಕಾರ್ಮಿಕ, ಗೃಹ ಮತ್ತು ಹಣಕಾಸು ಸಚಿವರಾಗಿ ಕೂಡ ಕರ್ತವ್ಯ ಸಲ್ಲಿಸಿದ್ದರು. ಪುತ್ತುಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಚಾಂಡಿ, ಅರ್ಧ ಶತಮಾನದ ವರೆಗೂ ಶಾಸಕರಾಗಿ ಸೇವೆ ಸಲ್ಲಿಸಿ ದಾಖಲೆ ನಿರ್ಮಿಸಿದ್ದಾರೆ.
ಉಮ್ಮನ್ ಚಾಂಡಿ ಅವರ ನಿಧನಕ್ಕೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಧಾನ ಸಭೆ ಸ್ಪೀಕರ್ ಎನ್.ಶಂಸೀರ್, ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್, ಕೇಂದ್ರ ಸಚಿವ ವಿ. ಮುರಳೀಧರನ್ ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಂತಾಪ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 7483551849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw