ಎಎಪಿ ಪಾಳಯ ಸೇರಿದ ಮಾಜಿ ಸಚಿವ ಅಖಂಡ ಪ್ರತಾಪ್ ಸಿಂಗ್: ಕೇಜ್ರಿವಾಲ್ ಪಾಲಿಗೆ ಇವ್ರೇ ‘ಮಹಾಪುರುಷ್’..!

14/06/2023

ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ ಮಾಜಿ ಸಚಿವ ಅಖಂಡ ಪ್ರತಾಪ್ ಸಿಂಗ್ ಯಾದವ್ ಅವರು ಸಂಸದ ಸಂಜಯ್ ಸಿಂಗ್ ಮತ್ತು ಇತರ ನಾಯಕರ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ (ಎಎಪಿ) ಸೇರ್ಪಡೆಗೊಂಡರು.

1977 ರಲ್ಲಿ ಮೊದಲ ಬಾರಿಗೆ ಮಧ್ಯಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದ ಯಾದವ್ ಅವರು ತಮ್ಮ ನಾಲ್ಕು ದಶಕಗಳ ರಾಜಕೀಯ ಜೀವನದಲ್ಲಿ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಆಡಳಿತಾರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ಪಕ್ಷಗಳೊಂದಿಗೆ ಕೆಲಸ ಮಾಡಿದ್ದರು.

ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್, ಅಖಂಡ ಪ್ರತಾಪ್ ಸಿಂಗ್ ಯಾದವ್ ಅವರನ್ನು ನಮ್ಮ ಪಕ್ಷದ ತೆಕ್ಕೆಗೆ ತೆಗೆದುಕೊಂಡಿದ್ದೇವೆ. ಇದೇ ವೇಳೆ ಅವರಿಗೆ ಧನ್ಯವಾದ ಅರ್ಪಿಸಿದ ಕೇಜ್ರಿವಾಲ್ ಅವರನ್ನು ‘ನಂಬಿಕೆ ಮತ್ತು ಪ್ರಾಮಾಣಿಕತೆಯ ವಿಗ್ರಹ’ ಎಂದು ಕರೆದರು.

ಅಖಂಡ ಪ್ರತಾಪ್ ಸಿಂಗ್ ಯಾದವ್ ಅವರ ಸೇರ್ಪಡೆಯು ಎಎಪಿಗೆ ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ. ಯಾಕೆಂದರೆ ಇವರು ಮೂರು ಬಾರಿ ಮಧ್ಯಪ್ರದೇಶ ವಿಧಾನಸಭೆಯ ಸದಸ್ಯರಾಗಿದ್ದರು. ಇವರು ಕಾಂಗ್ರೆಸ್ ಮತ್ತು ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇವರು ಮೊದಲು 1977 ರಲ್ಲಿ ಮಧ್ಯಪ್ರದೇಶ ವಿಧಾನಸಭೆಗೆ ಆಯ್ಕೆಯಾಗಿದ್ದರು. ನಂತರ 1993 ಮತ್ತು 2003 ರಲ್ಲಿ ಕೂಡಾ ಆಯ್ಕೆಯಾಗಿದ್ದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ

Exit mobile version