10:30 PM Tuesday 4 - November 2025

ಮಾಜಿ ಸಚಿವ ಹೆಚ್.ವೈ.ಮೇಟಿ ನಿಧನ

h y meti
04/11/2025

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಸಚಿವ ಹೆಚ್.ವೈ.ಮೇಟಿ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

79 ವರ್ಷ ವಯಸ್ಸಿನ ಮಾಜಿ ಸಚಿವ ಹೆಚ್.ವೈ.ಮೇಟಿ ಇತ್ತೀಚೆಗೆ ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ.

ಮಾಜಿ ಸಚಿವ ಹೆಚ್.ವೈ.ಮೇಟಿ ಅವರು ಆಸ್ಪತ್ರೆಗೆ ದಾಖಲಾಗಿದ್ದ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ  ಅವರು ಆಸ್ಪತ್ರೆಗೆ ಭೇಟಿ ನೀಡಿ ಇತ್ತೀಚೆಗೆ ಆರೋಗ್ಯ ವಿಚಾರಿಸಿದ್ದರು. ಅವರು ಚೇತರಿಸಿಕೊಳ್ಳುವಂತೆ ಹಾರೈಸಿದ್ದರು. ಆದರೆ ದುರಾದೃಷ್ಟವಶಾತ್ ಮೇಟಿ ಅವರು ಇಂದು ಕೊನೆಯುಸಿರೆಳೆದಿದ್ದಾರೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/H1duNIQRfXnJcfQKWPzNqD

ಇತ್ತೀಚಿನ ಸುದ್ದಿ

Exit mobile version