ಮಾಜಿ ಸಚಿವ ಸುರೇಶ್ ಕುಮಾರ್ ಗೆ ಅನಾರೋಗ್ಯ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ - Mahanayaka
12:18 AM Thursday 21 - August 2025

ಮಾಜಿ ಸಚಿವ ಸುರೇಶ್ ಕುಮಾರ್ ಗೆ ಅನಾರೋಗ್ಯ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

suresh kumar
03/09/2024


Provided by

ಬೆಂಗಳೂರು:  ಬಿಜೆಪಿಯ ಹಿರಿಯ ನಾಯಕ, ಮಾಜಿ ಸಚಿವ, ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಸುರೇಶ್ ಕುಮಾರ್ ಅವರು ಅನಾರೋಗ್ಯದ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ.

ವರದಿಗಳ ಪ್ರಕಾರ, ಅವರು ಅಪರೂಪದ ಜ್ವರಕ್ಕೆ ತುತ್ತಾಗಿದ್ದು, ಕಳೆದ ಕೆಲವು ದಿನಗಳಿಂದ ಆಯಾಸದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಸುರೇಶ್ ಕುಮಾರ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜ್ವರ ಮೆದುಳಿಗೆ ತಗುಲಿರುವ ಹಿನ್ನೆಲೆ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕಳೆದ ತಿಂಗಳು ಸುರೇಶ್ ಕುಮಾರ್ ಅವರು ಲವಲವಿಕೆಯಿಂದಿದ್ದರು. ಬೆಂಗಳೂರಿನಿಂದ ತಿರುಪತಿಗೆ ಸೈಕಲ್‌ನಲ್ಲಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿನಿಂದ ಮೈಸೂರಿಗೆ ನಡೆದ ಬಿಜೆಪಿ–ಜೆಡಿಎಸ್ ನಾಯಕರ ಪಾದಯಾತ್ರೆಯಲ್ಲೂ ಉತ್ಸಾಹದಿಂದ ಭಾಗಿಯಾಗಿದ್ದರು. ಇದಾದ ಬಳಿಕ ಅವರು ಆಯಾಸಗೊಂಡಿದ್ದರು ಎಂದು ಹೇಳಲಾಗಿದೆ.


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/BHOOdLNNvmD17cBJslQgwj

ಇತ್ತೀಚಿನ ಸುದ್ದಿ